ಸಿರಿಯಾ ಟರ್ಕಿ ಭೂಕಂಪನ 
ವಿದೇಶ

ಪ್ರಬಲ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 1,300ಕ್ಕೆ ಏರಿಕೆ, ಹಲವರು ನಾಪತ್ತೆ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 640 ದಾಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 1,300 ದಾಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಮುಂಜಾನೆ ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕಂಪನದ ತೀವ್ರತೆಯ ಪರಿಣಾಮ ಉಭಯ ದೇಶಗಳಲ್ಲಿ ನೂರಾರು ಕಟ್ಟಡಗಳು ಧರೆಗುರುಳಿದಿವೆ. ಕಂಪನದಿಂದಾಗಿ ಈ ವರೆಗೂ ಕನಿಷ್ಠ 1,300 ಜನರ ಬಲಿ ಪಡೆದಿದೆ.

ನೂರಾರು ಜನರು ಇನ್ನೂ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಕರ್ತರು ಪ್ರದೇಶದಾದ್ಯಂತ ನಗರಗಳು ಮತ್ತು ಪಟ್ಟಣಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಟರ್ಕಿ-ಸಿರಿಯಾದ ಗಡಿಯ ಎರಡೂ ಬದಿಯಲ್ಲಿ ಭೂಕಂಪನ ಸಂಭವಿಸಿದ್ದು, ನಿದ್ರೆಗೆ ಜಾರಿದ್ದ ಜನ ಚಿರನಿದ್ರೆಗೆ ಜಾರಿದ್ದಾರೆ. ಹಲವರು ಶೀತ, ಮಳೆ ಮತ್ತು ಹಿಮಭರಿತ ಚಳಿಗಾಲದ ಹೊರತಾಗಿಯೂ ಕಂಪನದಿಂದ ತಪ್ಪಿಸಿಕೊಳ್ಳಲು ರಾತ್ರಿ ವೇಳೆ ಹೊರಗೆ ದೌಡಾಯಿಸಿದ್ದಾರೆ.

ಕಂಪನದ ಪರಿಣಾಮ ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಭರದಿಂದ ಕಾರ್ಯಾಚರಣೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!