ಟರ್ಕಿ 
ವಿದೇಶ

ಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಲಿದೆ - ವಿಶ್ವಸಂಸ್ಥೆ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ  ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ...

ಕಹ್ರಾಮನ್ಮರಸ್: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ  ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ ಮಾನವೀಯ ನೆರವು ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಅವರು ಹೇಳಿದ್ದಾರೆ.

ಪರಿಸ್ಥಿತಿ ಪರಿಶೀಲಿಸಲು ಶನಿವಾರ ಟರ್ಕಿಯ ದಕ್ಷಿಣ ನಗರವಾದ ಕಹ್ರಾಮನ್‌ಮರಸ್‌ಗೆ ಆಗಮಿಸಿರುವ ಗ್ರಿಫಿತ್ಸ್ ಅವರು, ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

"ನಾವು ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ನಿಖರವಾಗಿ ಅಂದಾಜು ಮಾಡುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಆದರೆ ಖಂಡಿತವಾಗಿಯೂ ಸಾವಿನ ಸಂಖ್ಯೆ ದ್ವಿಗುಣ ಅಥವಾ ಅದಕ್ಕಿಂತ ಹೆಚ್ಚಾಗಲಿದೆ ಎಂದು" ಗ್ರಿಫಿತ್ಸ್ ಅವರು ಶನಿವಾರ ಸ್ಕೈ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

"ನಾವು ನಿಜವಾಗಿಯೂ ಸತ್ತವರ ಸಂಖ್ಯೆಯನ್ನು ನಿಖರವಾಗಿ ಎಣಿಸಲು ಪ್ರಾರಂಭಿಸಿಲ್ಲ" ಎಂದು ಅವರು ಹೇಳಿದ್ದಾರೆ.

ಶೀಘ್ರದಲ್ಲೇ, ರಕ್ಷಣಾ ಸಿಬ್ಬಂದಿಗಳು ಮಾನವೀಯ ನೆರವು ಏಜೆನ್ಸಿಗಳಿಗೆ ದಾರಿ ಮಾಡಿಕೊಡುತ್ತಾರೆ. ಮುಂದಿನ ತಿಂಗಳುಗಳಲ್ಲಿ ಭೂಕಂಪ ಪೀಡಿತರನ್ನು ನೋಡಿಕೊಳ್ಳುವುದು ಅವರ ಕೆಲಸವಾಗಲಿದೆ." ಎಂದು ಅವರು ಹೇಳಿದ್ದಾರೆ.

ಭೂಕಂಪದಿಂದಾಗಿ, ಟರ್ಕಿ ಮತ್ತು ಸಿರಿಯಾ ಸೇರಿದತೆ 2.6 ಕೋಟಿ ಜನರು ತೊಂದರೆಗೀಡಾಗಿದ್ದು, ತಾತ್ಕಾಲಿಕ ಟೆಂಟ್‌ಗಳನ್ನು ನಿರ್ಮಿಸಿ ಜನರನ್ನು ಸ್ಥಳಾಂತರಿಸಲಾಗುತ್ತಿದೆ. 

ಟರ್ಕಿಯಲ್ಲಿ ಇದುವರೆಗೆ 24,617 ಮತ್ತು ಸಿರಿಯಾದಲ್ಲಿ 3,574 ಜನರು ಸಾವನ್ನಪ್ಪಿದ್ದಾರೆ. ಎರಡೂ ದೇಶಗಳಲ್ಲಿ ಒಟ್ಟು 28,191 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮತ್ತು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel