ರೈಲು ಸ್ಫೋಟ 
ವಿದೇಶ

ಪಾಕಿಸ್ತಾನ: ರೈಲಿನಲ್ಲಿ ಸ್ಫೋಟ, ಇಬ್ಬರು ದುರ್ಮರಣ, 6 ಮಂದಿಗೆ ಗಾಯ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುವಾರ ಪ್ರಯಾಣಿಕರ ರೈಲಿನೊಳಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುವಾರ ಪ್ರಯಾಣಿಕರ ರೈಲಿನೊಳಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಕ್ವೆಟ್ಟಾದಿಂದ ರಾವಲ್ಪಿಂಡಿಗೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್ ಜಿಲ್ಲೆಯ ಚಿಚಾವಟ್ನಿ ತಲುಪಿದಾಗ ಪ್ರಯಾಣಿಕ ರೈಲಿನ ವಾಶ್‌ರೂಮ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಫೋಟದ ಸ್ವರೂಪವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಭಯೋತ್ಪಾದನಾ ನಿಗ್ರಹ ವಿಭಾಗದ ತಂಡವು ಸ್ಥಳಕ್ಕೆ ಆಗಮಿಸಿ ಸಾಕ್ಷ್ಯವನ್ನು ಸಂಗ್ರಹಿಸುತ್ತಿದೆ ಎಂದು ಮುಲ್ತಾನ್ ಉಪ ಅಧೀಕ್ಷಕ ಹಮ್ಮದ್ ಹಸನ್ ತಿಳಿಸಿದ್ದಾರೆ.

"ದಾಳಿಯ ಬಗ್ಗೆ ರೈಲ್ವೇ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಹಸನ್ ಹೇಳಿದ್ದಾರೆ. ಈ ಮಾರ್ಗದಲ್ಲಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video