ವಿದೇಶ

ಪಾಕಿಸ್ತಾನ: ಮಿಲಿಟರಿ ಕಾರ್ಯಾಚರಣೆಯಲ್ಲಿ 8 ಉಗ್ರರನ್ನು ಹೊಡೆದುರುಳಿಸಿದ ಸೇನೆ

Ramyashree GN

ಇಸ್ಲಾಮಾಬಾದ್: ದೇಶದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆ ಎಂಟು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಸೇನೆ ತಿಳಿಸಿದೆ.

ಬಲೂಚಿಸ್ತಾನದ ಕೆಚ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಐಎಸ್‌ಪಿಆರ್) ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಐಎಸ್‌ಪಿಆರ್ ಪ್ರಕಾರ, ಯುದ್ಧ ಪಡೆಗಳು ಯಾವುದೇ ಜೀವಹಾನಿಯಾಗದಂತೆ ಉಗ್ರರ ಪ್ರಯತ್ನವನ್ನು ವಿಫಲಗೊಳಿಸಿದವು. ಅಲ್ಲದೆ, ತಕ್ಷಣವೇ ಫಲಾಯನ ಮಾಡಲು ಯತ್ನಿಸುತ್ತಿದ್ದ ಭಯೋತ್ಪಾದಕರನ್ನು ಬೇಟೆಯಾಡಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪರಿಣಾಮವಾಗಿ, ಭಯೋತ್ಪಾದಕರ ಶಂಕಿತ ಅಡಗುತಾಣ ಪತ್ತೆಯಾಯಿತು. ಭಾರಿ ಗುಂಡಿನ ಚಕಮಕಿಯಲ್ಲಿ ಎಂಟು ಭಯೋತ್ಪಾದಕರು ಸಾವಿಗೀಡಾದರು. ಸ್ಫೋಟಕಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದೊಡ್ಡ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಐಎಸ್‌ಪಿಆರ್ ತಿಳಿಸಿದೆ.

ಪಾಕಿಸ್ತಾನದ ಭದ್ರತಾ ಪಡೆಗಳು ಗುಪ್ತಚರ ಸಂಸ್ಥೆಗಳ ಆದೇಶದ ಮೇರೆಗೆ, ಪ್ರಾಂತ್ಯದಲ್ಲಿ ಕಷ್ಟಪಟ್ಟು ಸಂಪಾದಿಸಿದ ಶಾಂತಿಯನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನವನ್ನು ವಿಫಲಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಪಾಕಿಸ್ತಾನ ಮಿಲಿಟರಿ ಹೇಳಿದೆ.

SCROLL FOR NEXT