ಗುಂಡಿನ ದಾಳಿ ನಡೆಸಿದ ಆರೋಪಿಯ ಭಾವಚಿತ್ರ ಬಿಡುಗಡೆಗೊಳಿಸಿರುವ ಪೊಲೀಸರು. 
ವಿದೇಶ

ಅಮೆರಿಕ: ಚೈನೀಸ್ ನ್ಯೂಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ; 10 ಮಂದಿ ಬಲಿಪಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು!

ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆಸಿ 10 ಮಂದಿಯ ಸಾವಿಗೆ ಕಾರಣವಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಲಾಸ್ ಎಂಜಲೀಸ್: ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆಸಿ 10 ಮಂದಿಯ ಸಾವಿಗೆ ಕಾರಣವಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಶನಿವಾರ ರಾತ್ರಿ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ನಲ್ಲಿ ಆರೋಪಿ ಗುಂಡಿನ ದಾಳಿ ನಡೆಸಿದ್ದ. ಚೀನೀ ಚಾಂದ್ರಮಾನ ಪದ್ಧತಿಯ ಪ್ರಕಾರ ಅರಂಭವಾಗುವ ಹೊಸವರ್ಷವನ್ನು ಸಂಭ್ರಮಿಸಲು ಪಾರ್ಕ್ ನಲ್ಲಿ ಸಾವಿರಾರು ಜನರು ಸೇರಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದ. ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿದ್ದರು.

ಪೊಲೀಸರು ಕೂಡಲೇ ಘಟನಾ ಸ್ಥಳವನ್ನು ಸುತ್ತುವರಿದು ಹಂತಕನ ಹಿಡಿಯಲು ಮುಂದಾದರು. ಆದರೆ, ಆರೋಪಿ ವಾಹನವೊಂದರಲ್ಲಿ ಅವಿತು ಸ್ವತಃ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮಾಂಟೆರಿ ಪಾರ್ಕ್‌ನ ಡ್ಯಾನ್ಸ್‌ ಕ್ಲಬ್‌ಗೆ ಅರೆ ಸ್ವಯಂಚಾಲಿತ ಗನ್ ಹಿಡಿದು ನುಗ್ಗಿದ ಹಂತಕ, ಮನಸೋಇಚ್ಚೆ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ 16 ಜನ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಲಾಸ್ ಏಂಜಲೀಸ್‌ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಭ್ರಮಾಚರಣೆಯಲ್ಲಿ ಚೀನಾದವರೇ ಹೆಚ್ಚಾಗಿದ್ದರು. ಇವರ ಮೇಲೆ ಗುಂಡಿನ ದಾಳಿ ಮಾಡಿದ ವ್ಯಕ್ತಿ ಕೂಡ ಏಷಿಯನ್. ಆತ ಚೀನಾ ಮೂಲದ ವಲಸಿಗ. ಇತ್ತೀಚೆಗಷ್ಟೇ ಆತ ಕ್ಯಾಲಿಪೋರ್ನಿಯಾಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದು, ಆತನ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಘಟನೆ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಅವರ ಪತ್ನಿ ಜಿಲ್ ಬೈಡನ್ ಆಘಾತ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿದ್ದಾರೆ. ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಜೋ ಬೈಡನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!