ಸಾಂದರ್ಭಿಕ ಚಿತ್ರ 
ವಿದೇಶ

ಚೀನಾ ಶಿಶುವಿಹಾರದಲ್ಲಿ ಚಾಕು ಇರಿತ: 3 ಮಕ್ಕಳು ಸೇರಿದಂತೆ ಆರು ಮಂದಿ ಸಾವು

ಇಂದು ಬೆಳಿಗ್ಗೆ ಶಿಶುವಿಹಾರದಲ್ಲಿ ನಡೆದ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿರುವ ಘಟನೆ ಚೀನಾದ ಆಗ್ನೇಯ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಬೀಜಿಂಗ್: ಇಂದು ಬೆಳಿಗ್ಗೆ ಶಿಶುವಿಹಾರದಲ್ಲಿ ನಡೆದ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿರುವ ಘಟನೆ ಚೀನಾದ ಆಗ್ನೇಯ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಲಿಯಾಂಜಿಯಾಂಗ್ ಕೌಂಟಿಯ ಪೊಲೀಸರ ಹೇಳಿಕೆಯಂತೆ ಇದೊಂದು “ಉದ್ದೇಶಪೂರ್ವಕ ಹಲ್ಲೆ” ಎಂದು ಹೇಳಿದ್ದು ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಲಿಪಶುಗಳಲ್ಲಿ ಒಬ್ಬ ಶಿಕ್ಷಕ, ಇಬ್ಬರು ಪೋಷಕರು ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಸರ್ಕಾರಿ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ. ದಾಳಿಯು ಬೆಳಿಗ್ಗೆ 7:40 ಕ್ಕೆ ನಡೆದಿದ್ದು, ಇದಾದ ಕೆಲವೇ ನಿಮಿಷಗಳ ನಂತರ ಶಂಕಿತನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಮೃತಪಟ್ಟವರಲ್ಲಿ ಓರ್ವ ಶಿಕ್ಷಕ, ಇಬ್ಬರು ಪೋಷಕರು ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಓರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಇದನ್ನು ಉದ್ದೇಶಪೂರ್ಕ  ಹಲ್ಲೆ ಎಂದು ಕರೆದಿದ್ದಾರೆ. ಯಾವುದೋ ದುರುದ್ದೇಶದಿಂದಲೇ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ