ವಿದೇಶ

ಫ್ರಾನ್ಸ್ ಪ್ರವಾಸ ಮುಗಿಸಿ ಅಬು ಧಾಬಿಗೆ ಆಗಮಿಸಿದ ಪ್ರಧಾನಿ ಮೋದಿ: ಅಧ್ಯಕ್ಷ ಶೇಖ್ ಮೊಹಮ್ಮದ್ ಭೇಟಿ

Sumana Upadhyaya

ಅಬು ಧಾಬಿ: ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್(UAE)ಗೆ ಒಂದು ದಿನದ ಭೇಟಿಗಾಗಿ ಇಂದು ಶನಿವಾರ ಆಗಮಿಸಿದರು. ಈ ಸಂದರ್ಭದಲ್ಲಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. ತಮ್ಮ ಭೇಟಿಯ ಸಂದರ್ಭದಲ್ಲಿ ಎರಡು ಕಾರ್ಯತಂತ್ರದ ಪಾಲುದಾರರ ನಡುವೆ ಬೆಳೆಯುತ್ತಿರುವ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಲಿದ್ದಾರೆ.

ಅಧಿಕೃತ ದ್ವಿಪಕ್ಷೀಯ ಭೇಟಿಗಾಗಿ ಯುಎಇಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಬು ಧಾಬಿಯ ರಾಜ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು.

ನನ್ನ ಸ್ನೇಹಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಭಾರತದಿಂದ ಹೊರಡುವ ವೇಳೆ ಹೇಳಿದ್ದರು. ನಮ್ಮ ಎರಡು ದೇಶಗಳು ವ್ಯಾಪಾರ, ಹೂಡಿಕೆ, ಇಂಧನ, ಆಹಾರ ಭದ್ರತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಫಿನ್‌ಟೆಕ್, ರಕ್ಷಣೆ, ಭದ್ರತೆ ಮತ್ತು ದೃಢವಾದ ಜನರ-ಜನರ ನಡುವಿನ ಸಂಬಂಧಗಳಂತಹ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ ಎಂದು ಹೇಳಿದರು.

SCROLL FOR NEXT