ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನ: ನಿರ್ಮಾಣ ಹಂತದ ಸೇತುವೆ ಬಳಿ ಗೋಡೆ ಕುಸಿದು 11 ಮಂದಿ ಕಾರ್ಮಿಕರು ಸಾವು

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸೇತುವೆ ನಿರ್ಮಾಣದ ಸ್ಥಳದಲ್ಲಿನ ರಸ್ತೆಬದಿಯ ತಮ್ಮ ಟೆಂಟ್‌ಗಳಲ್ಲಿ ಕಾರ್ಮಿಕರು ಕುಳಿತಿದ್ದಾಗ ಗೋಡೆ ಬಿದ್ದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿ ಮತ್ತು ರಕ್ಷಣಾ ತುರ್ತು ಸೇವೆಯ ಮೊಹಮ್ಮದ್ ಅಕ್ರಂ ಮಾತನಾಡಿ, ನೆರೆಯ ಗೊಲ್ರಾ ಬಳಿಯಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಈ ನಡುವೆಯೇ ಕುಸಿತ ಸಂಭವಿಸಿದೆ ಮತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹೇಳಿದರು.

ಜೂನ್ 25 ರಿಂದ ಪಾಕಿಸ್ತಾನದಲ್ಲಿ ಮಾನ್ಸೂನ್ ಮಳೆ ಸುರಿಯುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 112 ಜನರು ಸಾವಿಗೀಡಾಗಿದ್ದಾರೆ.

ಮಳೆಯಿಂದಾಗಿ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಪಾಕಿಸ್ತಾನದ ನದಿಗಳು ತುಂಬಿ ಹರಿಯುತ್ತಿವೆ. ನೂರಾರು ಹಳ್ಳಿಗಳು ಮುಳುಗಿವೆ ಮತ್ತು ಕನಿಷ್ಠ 15,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಕಳೆದ ಬಾರಿ ಮಳೆಯಿಂದಾಗಿ ಪಾಕಿಸ್ತಾನದ ಮೂರನೇ ಒಂದು ಭಾಗದಷ್ಟು ಪ್ರದೇಶ ನೀರಿನಲ್ಲಿ ಮುಳುಗಿದ್ದು, 1,739 ಜನರು ಮೃತಪಟ್ಟಿದ್ದರು. ಇದಾದ ಒಂದು ವರ್ಷದ ನಂತರ ಪಾಕಿಸ್ತಾನದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ.

2022 ರಲ್ಲಿ ಪ್ರವಾಹವು ನಗದು ಕೊರತೆಯಿರುವ ಪಾಕಿಸ್ತಾನದಲ್ಲಿ 30 ಬಿಲಿಯನ್ ಡಾಲರ್ ನಷ್ಟವನ್ನು ಉಂಟುಮಾಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮನವಿ ಸಲ್ಲಿಸಿದ ನಿಯೋಗ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪ

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

SCROLL FOR NEXT