ವಿದೇಶ

ಪಾಕಿಸ್ತಾನ: ರಾಜಕೀಯ ಪಕ್ಷದ ಸಮಾವೇಶದಲ್ಲಿ ಬಾಂಬ್ ಸ್ಫೋಟ; 39 ಮಂದಿ ಸಾವು

Lingaraj Badiger

ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಭಾನುವಾರ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 39 ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ-ಎಫ್) ಪಕ್ಷವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದ್ದು, ಅಫ್ಘಾನಿಸ್ತಾನ ಗಡಿ ಸಮೀಪವಿರುವ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

"ಆಸ್ಪತ್ರೆಯಲ್ಲಿ 39 ಮೃತ ದೇಹಗಳಿದ್ದು, 123 ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ 17 ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು" ಎಂದು ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆರೋಗ್ಯ ಸಚಿವ ರಿಯಾಜ್ ಅನ್ವರ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಪ್ರಾಂತೀಯ ಗವರ್ನರ್ ಹಾಜಿ ಗುಲಾಂ ಅಲಿ ಅವರು ಸಾವಿನ ಸಂಖ್ಯೆಯನ್ನು ಎಎಫ್‌ಪಿಗೆ ದೃಢಪಡಿಸಿದ್ದಾರೆ.

ಇದುವರೆಗೂ ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ ISIS ಸಂಘಟನೆಯ ಸ್ಥಳೀಯ ಘಟಕ ಇತ್ತೀಚೆಗೆ ಜೆಯುಐ-ಎಫ್ ಮೇಲೆ ದಾಳಿಗಳನ್ನು ನಡೆಸಿದೆ.

SCROLL FOR NEXT