ಮಜೀದ್ ಅಲಿ 
ವಿದೇಶ

ಪಾಕಿಸ್ತಾನದ ಪ್ರಸಿದ್ಧ ಯುವ ಸ್ನೂಕರ್ ಆಟಗಾರ ಮಜೀದ್ ಅಲಿ ಆತ್ಮಹತ್ಯೆ

ಪಾಕಿಸ್ತಾನದ ಖ್ಯಾತ ಸ್ನೂಕರ್ ಆಟಗಾರ ಹಾಗೂ ಏಷ್ಯನ್ ಅಂಡರ್-21 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ವಿಜೇತ ಮಜೀದ್ ಅಲಿ ಪಂಜಾಬ್ ನ ಫೈಸಲಾಬಾದ್ ಬಳಿಯ ತನ್ನ ಹುಟ್ಟೂರಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರಾಚಿ: ಪಾಕಿಸ್ತಾನದ ಖ್ಯಾತ ಸ್ನೂಕರ್ ಆಟಗಾರ ಹಾಗೂ ಏಷ್ಯನ್ ಅಂಡರ್-21 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ವಿಜೇತ ಮಜೀದ್ ಅಲಿ ಪಂಜಾಬ್ ನ ಫೈಸಲಾಬಾದ್ ಬಳಿಯ ತನ್ನ ಹುಟ್ಟೂರಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಲಿಗೆ 28 ವರ್ಷ ವಯಸ್ಸಾಗಿತ್ತು.  ಖಿನ್ನತೆಯಿಂದ ಬಳಲುತ್ತಿದ್ದ ಅಲಿ ಮರ ಕಡಿಯುವ ಯಂತ್ರದಿಂದ ತನ್ನ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಜೀದ್ ಅಲಿ ಹಲವಾರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದರು. ರಾಷ್ಟ್ರೀಯ ಮಟ್ಟದಲ್ಲಿ ಅಗ್ರ ಶ್ರೇಯಾಂಕದ ಆಟಗಾರರಾಗಿದ್ದರು. ಒಂದು ತಿಂಗಳಲ್ಲಿ ಸಾವನ್ನಪ್ಪಿದ ಎರಡನೇ ಸ್ನೂಕರ್ ಆಟಗಾರ ಮಜೀದ್ ಅಲಿ. ಕಳೆದ ತಿಂಗಳು, ಅಂತರರಾಷ್ಟ್ರೀಯ ಸ್ನೂಕರ್ ಆಟಗಾರ ಮುಹಮ್ಮದ್ ಬಿಲಾಲ್ ಹೃದಯ ಸ್ತಂಭನದಿಂದ ನಿಧನರಾಗಿದ್ದರು.

ಮಜೀದ್ ತನ್ನ ಹದಿಹರೆಯದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದ. ಇದು ನಮಗೆ ಭಯಾನಕ ಸಂಗತಿಯಾಗಿದೆ. ಏಕೆಂದರೆ ಅತ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೆ ಎಂದು ನಾವು ಎಂದಿಗೂ ನಿರೀಕ್ಷಿಸಿರಲಿಲ್ಲಎಂದು ಸಹೋದರ ಉಮರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT