ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

'ಆಡಳಿತ ಬದಲಿಸಿದ ಪಿತೂರಿ'ಗೆ ಪಾಕಿಸ್ತಾನಿಗಳು ಭಾರೀ ಬೆಲೆ ತೆರುತ್ತಿದ್ದಾರೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್

ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. 

ಇಸ್ಲಾಮಾಬಾದ್: ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. 

ಮಾಜಿ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಮತ್ತೊಮ್ಮೆ ಕೆಲವು ಅಪರಾಧಿಗಳು ಅಧಿಕಾರಕ್ಕೆ ಬರಲು ಸಹಾಯ ಮಾಡಿದ್ದಾರೆ ಎಂದು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಅಧ್ಯಕ್ಷ ಇಮ್ರಾನ್ ಖಾನ್ ಆರೋಪಿಸಿದ್ದು ಸರ್ಕಾರದ ಸಾಲವನ್ನು ಹೆಚ್ಚಿಸಿದೆ ಮತ್ತು ಹಣದುಬ್ಬರವು ಕಾಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಂತರ್ ಬ್ಯಾಂಕ್ ಮಾರುಕಟ್ಟೆಯಲ್ಲಿ ಡಾಲರ್ ಎದುರು ಪಾಕಿಸ್ತಾನದ ರೂಪಾಯಿ 18.74 ಪಾಯಿಂಟ್ ಗಳ ಕುಸಿತ ಕಂಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಗೆ ಸರ್ಕಾರದ ನಿಲುವು ಇದಕ್ಕೆ ಕಾರಣ ಎಂದು ವಿಶ್ಲೇಷಕರು ಹೇಳಿದ್ದಾರೆ. ಪಾಕಿಸ್ತಾನದ ಆರ್ಥಿಕತೆಯು ನಗದು ಕೊರತೆಯನ್ನು ಎದುರಿಸುತ್ತಿರುವ ಅಸ್ಥಿರ ಸ್ಥಿತಿಯಲ್ಲಿದೆ. ಕೆಲವು ವಾರಗಳ ಹಿಂದೆ, ಇಲ್ಲಿನ ವಿದೇಶೀ ವಿನಿಮಯ ಸಂಗ್ರಹವು ಸಾರ್ವಕಾಲಿಕ ಕನಿಷ್ಠ $2.9 ಶತಕೋಟಿಗೆ ಕುಸಿಯಿತು ಎಂದರು.

ಇಮ್ರಾನ್ ಖಾನ್ ಅವರನ್ನು ಏಪ್ರಿಲ್‌ನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ಹೊರಹಾಕಲಾಯಿತು. ಅಂದಿನಿಂದ ಅವರ ಮತ್ತು ಬಾಜ್ವಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಮಾಜಿ ಸೇನಾ ಮುಖ್ಯಸ್ಥ ತನ್ನನ್ನು ಕೊಲ್ಲಲು ಮತ್ತು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಬಯಸಿದ್ದರು ಎಂದು ಖಾನ್ ಈ ಹಿಂದೆ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT