ಪಾಕ್ ನಲ್ಲಿ ಹಿಂಸಾಚಾರ 
ವಿದೇಶ

ಇಮ್ರಾನ್ ಬಂಧನ: ದೇಶಾದ್ಯಂತ ಹಿಂಸಾಚಾರ; ಪಾಕ್ ಸೇನಾ ಪ್ರಧಾನ ಕಚೇರಿ ಧ್ವಂಸ, 'ಕಂಡಲ್ಲಿ ಗುಂಡು' ಆದೇಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದ ನಂತರ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ. ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದ ನಂತರ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ. ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪ್ರತಿಭಟನಾಕಾರರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸ ಮತ್ತು ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯ ಆವರಣವನ್ನು ಪ್ರವೇಶಿಸಿದರು. ಇದರಿಂದಾಗಿ ಅಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.

ಪಾಕಿಸ್ತಾನ ಸೇನೆಯ ರಾವಲ್ಪಿಂಡಿ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಕಾರ್ಪ್ಸ್ ಕಮಾಂಡರ್ ಮನೆಗೆ ಇಮ್ರಾನ್ ಖಾನ್ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅಲ್ಲದೆ ಪಾಕ್ ಸೇನೆಯು ಪ್ರತಿಭಟನಾಕಾರರಿಗೆ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಿದೆ. ಇಮ್ರಾನ್ ಖಾನ್ ಬೆಂಬಲಿಗರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ ಮನೆ ಮೇಲೆ ದಾಳಿ ನಡೆಸಿದರು. ಸರ್ಗೋಧಾ, ಪೇಶಾವರ, ಲಾಹೋರ್ ಮತ್ತು ಮರ್ದಾನ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ ಹೆಡ್‌ಕ್ವಾರ್ಟರ್ಸ್ ಮೇಲೆ ಪ್ರಮುಖ ದಾಳಿಗಳು ನಡೆದಿವೆ.

ಇಸ್ಲಾಮಾಬಾದ್ ಹೈಕೋರ್ಟ್ ಬಳಿ ಇಮ್ರಾನ್ ಖಾನ್ ಬಂಧನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಅವರು ಈ ವಿಷಯದ ಬಗ್ಗೆ ಗಮನ ಹರಿಸಿದ್ದಾರೆ. ಅವರು 15 ನಿಮಿಷಗಳಲ್ಲಿ ಇಸ್ಲಾಮಾಬಾದ್ ಪೊಲೀಸ್ ಮುಖ್ಯಸ್ಥ ಮತ್ತು ಗೃಹ ಕಾರ್ಯದರ್ಶಿಯನ್ನು ಕರೆದರು. ಇಮ್ರಾನ್ ಖಾನ್ ಬಂಧನಕ್ಕೂ ಮುನ್ನ, ಮಂಗಳವಾರ, ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಹಲವಾರು ಪ್ರಕರಣಗಳಲ್ಲಿ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಅನುಮೋದಿಸಿತ್ತು. ಖಾನ್ ಪ್ರಸ್ತುತ ದೇಶಾದ್ಯಂತ 121 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ದೇಶದ್ರೋಹ, ಭಯೋತ್ಪಾದನೆ, ಧರ್ಮನಿಂದನೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಆರೋಪಗಳು ಸೇರಿವೆ.

ಹೆಚ್ಚುವರಿ ಅಟಾರ್ನಿ ಜನರಲ್‌ಗೆ 15 ನಿಮಿಷಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದರು. ಇಸ್ಲಾಮಾಬಾದ್‌ನ ಪೊಲೀಸ್ ಮುಖ್ಯಸ್ಥರು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಪಾಕಿಸ್ತಾನದ ಪ್ರಧಾನಿಗೆ ಸಮನ್ಸ್ ನೀಡುವುದಾಗಿ ಅವರು ಹೇಳಿದರು. ನ್ಯಾಯಾಲಯದ ಆವರಣದಲ್ಲೇ ಬಂಧನದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಅವರು, ಯಾವ ಪ್ರಕರಣದಲ್ಲಿ ಬಂಧನವಾಗಿದೆ ಎಂಬುದನ್ನು ನೀವೇ ಹೇಳಿ ಎಂದರು. 15 ನಿಮಿಷಗಳ ಬದಲು 45 ನಿಮಿಷಗಳ ನಂತರ ಅಟಾರ್ನಿ ಜನರಲ್ ನ್ಯಾಯಾಲಯವನ್ನು ತಲುಪಿದರು. ವಿಚಾರಣೆ ಪುನರಾರಂಭವಾದ ನಂತರ ಮುಖ್ಯ ನ್ಯಾಯಮೂರ್ತಿಗಳು ಆಕ್ರೋಶ ವ್ಯಕ್ತಪಡಿಸಿದರು.

ಇಸ್ಲಾಮಾಬಾದ್ ಐಜಿ, ಇಮ್ರಾನ್ ಬಂಧನದ ಬಗ್ಗೆ ಮಾಧ್ಯಮಗಳಿಂದ ತಿಳಿದು ಬಂದಿದೆ ಎಂದು ಉತ್ತರಿಸಿದರು. ಇಮ್ರಾನ್ ಖಾನ್ ಅವರ ಬಂಧನ ವಾರಂಟ್ ಅನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಿದ ಅವರು, ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ನ್ಯಾಯಾಧೀಶರಿಗೆ ತಿಳಿಸಿದರು. ಒಂದು ವೇಳೆ ಬಂಧಿಸಿರುವುದು ಕಾನೂನು ಉಲ್ಲಂಘನೆಯಾಗಿದ್ದರೆ ಸೂಕ್ತ ಆದೇಶ ನೀಡುತ್ತೇನೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT