ಪ್ರಧಾನಿ ನರೇಂದ್ರ ಮೋದಿ 
ವಿದೇಶ

ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿ

ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಿಡ್ನಿ: ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾ ಸ್ಟೇಡಿಯಂ ತುಂಬಾ ಕಿಕ್ಕಿರಿದು ತುಂಬಿದ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರದಾನಿ ಮೋದಿ, ಭಾರತದಲ್ಲಿ ಸಾಮರ್ಥ್ಯ, ಸಂಪನ್ಮೂಲಕ್ಕೆ ಕೊರತೆ ಇಲ್ಲ, ಭಾರತ ಟ್ಯಾಲೆಂಟ್ ಪ್ಯಾಕ್ಟರಿ ಆಗಿದೆ ಎಂದರು.

ಜಾಗತಿಕ ಆರ್ಥಿಕತೆಯಲ್ಲಿ ಮುಂಚೂಣಿ ರಾಷ್ಟ್ರವೆಂದು ಐಎಂಎಫ್ ಪರಿಗಣಿಸಿದೆ. ಇಂದು ಹಲವಾರು ದೇಶಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ತೊಂದರೆಯಲ್ಲಿದೆ ಆದರೆ ಭಾರತದ ಬ್ಯಾಂಕ್‌ಗಳ ಬಲವನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ: 100 ವರ್ಷಗಳಿಗೊಮ್ಮೆ ಎದುರಾಗುವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಭಾರತ ಕಳೆದ ವರ್ಷ ದಾಖಲೆಯ ರಫ್ತು ಮಾಡಿದೆ. ನಮ್ಮ ವಿದೇಶೀ ವಿನಿಮಯ ಹೊಸ ಎತ್ತರಕ್ಕೆ ಏರುತ್ತಿದೆ. ಜಾಗತಿಕ ಒಳಿತಿಗಾಗಿ ಭಾರತ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ  ನಮ್ಮ ಡಿಜಿಟಲ್ ತಂತ್ರಜ್ಞಾನದ ಪಾಲಿದೆ. ಭಾರತದ ಫಿನ್‌ಟೆಕ್ ಕ್ರಾಂತಿಯ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ ಎಂದರು. 

2014 ರಲ್ಲಿ ಇಲ್ಲಿಗೆ ಬಂದಾಗ ಮತ್ತೆ ಬರುವುದಾಗಿ ಭರವಸೆ ನೀಡಿದ್ದೆ. ಅದರಂತೆ ಈಗ ಮತ್ತೊಮ್ಮೆ ಸಿಡ್ನಿಯಲ್ಲಿದ್ದೇನೆ. ಈ ಹಿಂದೆ, ಭಾರತ ಮತ್ತು ಆಸ್ಟ್ರೇಲಿಯಾ ಸಂಬಂಧವನ್ನು ಕಾಮನ್‌ವೆಲ್ತ್, ಕ್ರಿಕೆಟ್ ಮತ್ತು ಕರಿಗಳಿಂದ ವ್ಯಾಖ್ಯಾನಿಸಲಾಗುತಿತ್ತು. ನಂತರ 'ಪ್ರಜಾಪ್ರಭುತ್ವ, ಅನಿವಾಸಿ ಭಾರತೀಯರು ಮತ್ತು ದೋಸ್ತಿಯಿಂದ ವ್ಯಾಖ್ಯಾನಿಸಲಾಗಿದೆ ಎಂದರು. ಸಂಬಂಧವು ಇಂಧನ, ಆರ್ಥಿಕತೆ ಮತ್ತು ಶಿಕ್ಷಣದ ಮೇಲೆ ಅವಲಂಬಿತವಾಗಿದ್ದರೂ ಉಭಯ ದೇಶಗಳ ಸಂಬಂಧವು ಇದನ್ನು ಮೀರಿದೆ ಅದು ಪರಸ್ಪರ ನಂಬಿಕೆ ಮತ್ತು ಪರಸ್ಪರ ಗೌರವವಾಗಿದೆ ಎಂದು ತಿಳಿಸಿದರು.

ಮಾರ್ಚ್‌ನಲ್ಲಿ ಕೈಗೊಂಡಿದ್ದ ಭಾರತ ಪ್ರವಾಸ ಮರೆಯಲಾಗದ ಕ್ಷಣವಾಗಿತ್ತು. ಹೋದಲ್ಲೆಲ್ಲಾ, ನಾನು ಆಸ್ಟ್ರೇಲಿಯಾ ಮತ್ತು ಭಾರತದ ಜನರ ನಡುವಿನ ಆಳವಾದ ಸಂಬಂಧವನ್ನು ಅನುಭವಿಸಿದೆ. ನೀವು ಭಾರತವನ್ನು ಅರ್ಥಮಾಡಿಕೊಳ್ಳಲು ಬಯಸಿದರೆ, ರೈಲು ಮತ್ತು ಬಸ್‌ನಲ್ಲಿ ಪ್ರಯಾಣಿಸಿ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದರು. 

ಇದಕ್ಕೂ ಮುನ್ನಾ ವೇದ ಮಂತ್ರಗಳ ಜಯಘೋಷದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT