ಮೊಹಮ್ಮದ್ ಮುಯಿಝು 
ವಿದೇಶ

ಮಾಲ್ಡೀವ್ಸ್ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ಮಾಲ್ಡೀವ್ಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್(ಪಿಪಿಎಂ) ಪಕ್ಷದ ಅಭ್ಯರ್ಥಿ ಮೊಹಮ್ಮದ್ ಮುಯಿಝು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಲ್ಡೀವ್ಸ್...

ಮಾಲ್ಡೀವ್ಸ್: ಮಾಲ್ಡೀವ್ಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್(ಪಿಪಿಎಂ) ಪಕ್ಷದ ಅಭ್ಯರ್ಥಿ ಮೊಹಮ್ಮದ್ ಮುಯಿಝು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಲ್ಡೀವ್ಸ್ ಆಹ್ವಾನಿಸಿದೆ. ಆದರೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ಚೀನಾದ ಬಗ್ಗೆ ವ್ಯಾಪಕವಾಗಿ ಒಲವು ಹೊಂದಿರುವ ಮುಯಿಝು ಅವರು ನವೆಂಬರ್ 17 ರಂದು ಮಾಲ್ಡೀವ್ಸ್ ನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

"ಪ್ರಧಾನಿ ಮೋದಿ ಅವರಿಗೆ(ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ) ಭಾಗವಹಿಸಲು ಆಹ್ವಾನ ಬಂದಿದೆ. ಆದರೆ ನಮ್ಮನ್ನು ಯಾರು ಮತ್ತು ಯಾವ ಮಟ್ಟದಲ್ಲಿ ಪ್ರತಿನಿಧಿಸುತ್ತಾರೆ ಎಂಬುದರ ಕುರಿತು ನಾವು ನಿರ್ಧಾರ ತೆಗೆದುಕೊಂಡ ನಂತರ ನಿಮಗೆ ತಿಳಿಸುತ್ತೇನೆ" ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಅವರು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಯಿಝು, ಹಾಲಿ ಅಧ್ಯಕ್ಷ ಇಬ್ರಾಹಿಂ ಸೋಲಿಹ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಮಾಲ್ಡೀವ್ಸ್ ಅಧ್ಯಕ್ಷರಾಗಿ ಆಯ್ಕೆಯಾದ ಮುಯಿಝು ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದರು. ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಒಟ್ಟಾರೆ ಸಹಕಾರ ಹೆಚ್ಚಿಸಲು ಭಾರತ ಬದ್ಧವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT