ಗಾಜಾದ ಅಲ್ -ಶಿಫಾ ಆಸ್ಪತ್ರೆ 
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಗಾಜಾದ ಅಲ್-ಶಿಫಾ ಆಸ್ಪತ್ರೆ' ಕಾರ್ಡಿಯಾಕ್ ವಾರ್ಡ್ ನಾಶ

ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ಬಾಂಬ್ ಸ್ಫೋಟಗಳು ನಡೆಯುತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಜಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಸ್ಪತ್ರೆಯೊಳಗೆ ಶಸ್ತ್ರ ಚಿಕಿತ್ಸೆಯಾದ 600 ರೋಗಿಗಳು, 37 ರಿಂದ 40 ಶಿಶುಗಳು ಮತ್ತು 17 ಜನರು ತೀವ್ರ ನಿಗಾ ಘಟಕದಲ್ಲಿದ್ದು, ಅವರಿಗೆ ನೀರು, ವಿದ್ಯುತ್, ಆಹಾರ ಅಥವಾ ಇಂಟರ್ ನೆಟ್ ದೊರೆಯದಂತಾಗಿದೆ. ಅಪಾರ ಸಂಖ್ಯೆಯ ಜನರು  ಆಸ್ಪತ್ರೆಯ ಆವರಣದಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಶಸ್ತ್ರಚಿಕಿತ್ಸಕ ಮೊಹಮ್ಮದ್ ಒಬೇದ್ ಹೇಳಿದ್ದಾರೆ.

'ಕದನ ವಿರಾಮದೊಂದಿಗೆ ತಕ್ಷಣವೇ ಈ ರಕ್ತಪಾತವನ್ನು ನಿಲ್ಲಿಸದಿದ್ದರೆ ಅಥವಾ ರೋಗಿಗಳ ವೈದ್ಯಕೀಯ ಸ್ಥಳಾಂತರಿಸುವಿಕೆಯನ್ನು ನಿಲ್ಲಿಸದಿದ್ದರೆ, ಈ ಆಸ್ಪತ್ರೆಗಳು ಶವಾಗಾರವಾಗುತ್ತವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾನುವಾರ ಇಸ್ರೇಲಿ ಪಡೆಗಳು ಮತ್ತು ಹಮಾಸ್ ನಡುವಿನ ಭಾರೀ ಹೋರಾಟದಲ್ಲಿ ಗಾಜಾದ ಆಸ್ಪತ್ರೆಗಳಲ್ಲಿ ಸಾವಿರಾರು ಜನರು ಸಿಕ್ಕಿಬಿದ್ದಿದ್ದಾರೆ. ಕದನ ವಿರಾಮ ಇಲ್ಲದಿದ್ದರೆ ರೋಗಿಗಳಿಗೆ ಸೌಲಭ್ಯ ದೊರೆಯದೆ ಸಾಯುತ್ತಾರೆ ಎಂದು ವೈದ್ಯರು ಮತ್ತು ಸಹಾಯ ಕಾರ್ಯಕರ್ತರು ಎಚ್ಚರಿಸಿದ್ದಾರೆ.

ತಮ್ಮ ಇನ್‌ಕ್ಯುಬೇಟರ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡ ನಂತರ ಅಲ್-ಶಿಫಾ ಆಸ್ಪತ್ರೆಯ ನವಜಾತ ಘಟಕದಲ್ಲಿದ್ದ ಎರಡು ಶಿಶುಗಳು ಸಾವನ್ನಪ್ಪಿವೆ ಮತ್ತು ವೆಂಟಿಲೇಟರ್ ಸ್ಥಗಿತಗೊಂಡಾಗ ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ ಎಂದು ಶಸ್ತ್ರಚಿಕಿತ್ಸಕರೊಬ್ಬರು ತಮ್ಮ ಸಾಮಾಜಿಕ ಜಾಲತಾದಣ ಎಕ್ಸ್ ನಲ್ಲಿ   ಪೋಸ್ಟ್ ಮಾಡಿದ ಆಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT