ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ 
ವಿದೇಶ

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ

ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

ಬಾಂಗ್ಲಾ: ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ. ಆಡಳಿತಾರೂಢ ಬಾಂಗ್ಲಾದೇಶ್ ಅವಾಮಿ ಲೀಗ್ ಗೆ ಸೇರ್ಪಡೆಯಾಗಿರುವ ಶಕೀಬ್ ಅಲ್ ಹಸನ್ ಮುಂದಿನ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. 

ಬಾಂಗ್ಲಾದೇಶದಲ್ಲಿ ಜ.07 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ನಡೆಯಲಿದೆ. ಶಕೀಬ್ ಅವರು 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಕ್ಕಾಗಿ ನಾಮಪತ್ರ ಫಾರ್ಮ್ ಗಳನ್ನು ಪಡೆದಿದ್ದಾರೆ ಎಂದು ಪಕ್ಷದ ಜಂಟಿ ಪ್ರಧಾನ ಕಾರ್ಯದರ್ಶಿ ಬಹಾವುದ್ದೀನ್ ನಸೀಮ್ ಹೇಳಿದ್ದಾರೆ.
 
ಬಾಂಗ್ಲಾದೇಶದಲ್ಲಿ ಪ್ರಮುಖ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅವರು ಸೆಲೆಬ್ರಿಟಿ ಮತ್ತು ದೇಶದ ಯುವಜನರಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿದ್ದಾರೆ" ಎಂದು ಕ್ರಿಕೆಟ್ ಆಲ್ರೌಂಡರ್ ನ್ನು ಸ್ವಾಗತಿಸಿದ ನಾಸಿಮ್ ಹೇಳಿದರು.

ಶಾಕಿಬ್ ಅವರ ಉಮೇದುವಾರಿಕೆಯನ್ನು ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಆಡಳಿತ ಪಕ್ಷದ ಸಂಸದೀಯ ಮಂಡಳಿಯು ದೃಢಪಡಿಸಬೇಕಾಗಿದೆ. ಅವರು ತಮ್ಮ ನೈಋತ್ಯ ತವರು ಜಿಲ್ಲೆ ಮಗರಾದಲ್ಲಿ ಅಥವಾ ರಾಜಧಾನಿ ಢಾಕಾದಲ್ಲಿ ಸ್ಪರ್ಧಿಸಲು ಆಶಿಸುತ್ತಿದ್ದಾರೆ ಎಂದು ನಾಸಿಮ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್