ಇಸ್ರೇಲ್- ಹಮಾಸ್ ಯುದ್ಧ: ಗಾಜಾದಲ್ಲಿ ಇನ್ನೂ ಒತ್ತೆಯಾಳಾಗಿರುವ 18 ಥಾಯ್ ಪ್ರಜೆಗಳು
ಕದನವಿರಾಮ ಒಪ್ಪಂದದಂತೆ 2ನೇ ಹಂತದಲ್ಲಿ ಒಟ್ಟು 17 ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರೂ ಇನ್ನೂ 18 ಥಾಯ್ ಪ್ರಜೆಗಳು ಗಾಜಾದಲ್ಲಿ ಒತ್ತೆಯಾಳಾಗಿ ಇರುವುದಾಗಿ ಥಾಯ್ಲೆಂಡ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಗಾಜಾ: ಕದನವಿರಾಮ ಒಪ್ಪಂದದಂತೆ 2ನೇ ಹಂತದಲ್ಲಿ ಒಟ್ಟು 17 ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರೂ ಇನ್ನೂ 18 ಥಾಯ್ ಪ್ರಜೆಗಳು ಗಾಜಾದಲ್ಲಿ ಒತ್ತೆಯಾಳಾಗಿ ಇರುವುದಾಗಿ ಥಾಯ್ಲೆಂಡ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಈ ಮಧ್ಯೆ ಶನಿವಾರ ರಾತ್ರಿ ಬಿಡುಗಡೆಯಾದ ನಾಲ್ವರು ಥಾಯ್ ಪ್ರಜೆಗಳ ಹೆಸರನ್ನು ಥಾಯ್ ಪ್ರಧಾನಿ ಶ್ರೆತ್ತಾ ಥಾವಿಸಿನ್ ಬಹಿರಂಗಗೊಳಿಸಿದ್ದಾರೆ. ಈ ನಾಲ್ವರನ್ನು ಬೀರ್ ಯಾಕೋವ್ನಲ್ಲಿರುವ ಅಸ್ಸಾಫ್ ಹರೋಫೆ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.
ಹಮಾಸ್ ಹಾಗೂ ಇಸ್ರೇಲ್ ನಡುವಿನ ಒಪ್ಪಂದದನ್ವಯ 3 ಹಾಗೂ 1ರ ಅನುಪಾತದಲ್ಲಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಅಂದರೆ ಹಂತ, ಹಂತವಾಗಿ ಹಮಾಸ್ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್ನಿಂದ 150 ಪ್ಯಾಲೆಸ್ಟೀನ್ ಕೈದಿಗಳ ಬಿಡುಗಡೆ ಕುರಿತಂತೆ ಒಪ್ಪಂದ ಆಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.