ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ಸೋಮವಾರ ಮಾಹಿತಿ ನೀಡಿದೆ.
‘ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಸರೋಘ ಪ್ರದೇಶದಲ್ಲಿ ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಸೈನಿಕರು ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, 8 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: 26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್
ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ತಿಳಿಸಿದೆ. ಹತ್ಯೆಯಾದ ಭಯೋತ್ಪಾದಕರು ಯಾವ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿಲ್ಲ.