ಸಾಂದರ್ಭಿಕ ಚಿತ್ರ 
ವಿದೇಶ

ಅಮೆರಿಕಾದಲ್ಲಿ ಭಾರತೀಯ ಮೂಲದ ದಂಪತಿ, ಇಬ್ಬರು ಮಕ್ಕಳು ಮನೆಯಲ್ಲಿ ಶವವಾಗಿ ಪತ್ತೆ

ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ಭಾರತೀಯ ಮೂಲದ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನ್ಯೂಯಾರ್ಕ್: ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ಭಾರತೀಯ ಮೂಲದ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೃತರನ್ನು ತೇಜ್ ಪ್ರತಾಪ್ ಸಿಂಗ್(43) ಮತ್ತು ಸೋನಾಲ್ ಪರಿಹಾರ್ (42) ಅವರು 10 ವರ್ಷದ ಮಗ ಮತ್ತು 6 ವರ್ಷದ ಮಗಳೊಂದಿಗೆ ತಮ್ಮ ಪ್ಲೇನ್ಸ್‌ಬರೋ ಮನೆಯಲ್ಲಿ ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆ ತಿಳಿಸಿದೆ.

ಮಿಡ್ಲ್‌ಸೆಕ್ಸ್ ಕೌಂಟಿ ಪ್ರಾಸಿಕ್ಯೂಟರ್ ಯೋಲಾಂಡಾ ಸಿಕ್ಕೋನ್ ಮತ್ತು ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆಯ ಮುಖ್ಯ ಎಮಾನ್ ಬ್ಲಾಂಚಾರ್ಡ್ ಅವರು, ಪ್ರಸ್ತುತ ನರಹತ್ಯೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗುರುವಾರ ಹೇಳಿದ್ದಾರೆ.

ಅಕ್ಟೋಬರ್ 4 ರ ಸಂಜೆ, ಅಧಿಕಾರಿಗಳು ಪ್ಲೇನ್ಸ್‌ಬೊರೊದಲ್ಲಿನ ನಿವಾಸದಲ್ಲಿ ಸುರಕ್ಷತೆ ಪರಿಶೀಲನೆಗಾಗಿ 911ಕ್ಕೆ ಕರೆ ಬಂದಿತ್ತು. ನಂತರ ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆಯು ಆ ಮನೆಗೆ ತೆರಳಿ ಪರಿಶೀಲಿಸಿದಾಗ ನಾಲ್ವರ ಮೃತದೇಹಗಳು ಪತ್ತೆಯಾಗಿವೆ” ಎಂದು ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಈ ದುರಂತದ ಬಗ್ಗೆ ತನಿಖೆ ನಡೆಯುತ್ತಿದೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಸಲಾಗುತ್ತಿದೆ". ಸಾರ್ವಜನಿಕರಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT