ಸಾಂದರ್ಭಿಕ ಚಿತ್ರ 
ವಿದೇಶ

ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ಟೇಕಾಫ್

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದ್ದು, ಮೊದಲ ಚಾರ್ಟರ್ ಫ್ಲೈಟ್ ಗುರುವಾರ ರಾತ್ರಿ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.

ಜೆರುಸಲೇಂ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದ್ದು, ಮೊದಲ ಚಾರ್ಟರ್ ಫ್ಲೈಟ್ ಗುರುವಾರ ರಾತ್ರಿ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.

ಇಸ್ರೇಲ್‌ನಲ್ಲಿ ನೆಲೆಸಿರುವ ಸುಮಾರು 230 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ 9 ಗಂಟೆಗೆ ಟೇಕಾಫ್ ಆಗಲಿದೆ. "ಮೊದಲಿಗೆ ಬಂದವರಿಗೆ ಮೊದಲು ಸೇವೆ" ಆಧಾರದ ಮೇಲೆ ಅವರು ಭಾರತಕ್ಕೆ ತೆರಳಲಿದ್ದಾರೆ ಎಂದು ಬಲ್ಲ ಮೂಲಗಳು ಪಿಟಿಐಗೆ ತಿಳಿಸಿವೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ನಂತರ ಯುದ್ಧದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಏರ್ ಇಂಡಿಯಾ ತನ್ನ ಹಾರಾಟವನ್ನು ತಕ್ಷಣವೇ ಸ್ಥಗಿತಗೊಳಿಸಿದ್ದು, ಹಲವು ಭಾರತೀಯರು ದೇಶಕ್ಕೆ ಮರಳು ಸಾಧ್ಯವಾಗದೇ ಇಸ್ರೇಲ್ ನಲ್ಲಿ ಸಿಲುಕಿದ್ದಾರೆ.

ಆಪರೇಷನ್ ಅಜಯ್ ಅಡಿ ಇಸ್ರೇಲ್ ನಿಂದ ದೇಶಕ್ಕೆ ವಾಪಸಾಗುತ್ತಿರುವ ಭಾರತೀಯರು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ ಮತ್ತು ಅವರ ಪ್ರಯಾಣದ ವೆಚ್ಚವನ್ನು ಸರ್ಕಾರ ಭರಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT