ಬೀಜಿಂಗ್: ಇಸ್ರೇಲ್ ಮತ್ತು ಹಮಾಸ್ ನಡುವೆ 7 ದಿನಗಳಿಂದ ಯುದ್ಧ ನಡೆಯುತ್ತಿದೆ. ಇದೇ ವೇಳೆ ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಕಚೇರಿ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ದಾಳಿ ನಡೆಸಿದ್ದಾನೆ.
ಇಸ್ರೇಲ್ ವಿದೇಶಾಂಗ ಸಚಿವಾಲಯ ಈ ಮಾಹಿತಿ ನೀಡಿದೆ. ರಾಜತಾಂತ್ರಿಕ ಕಚೇರಿ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ವಾಸ್ತವವಾಗಿ, ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಮುಂದುವರಿಯುತ್ತದ್ದು ಇದೇ ವೇಳೆ ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ಚಾಕುವಿನಿಂದ ದಾಳಿ ಮಾಡಿದ್ದಾನೆ.
ಪ್ರಪಂಚದ ಎಲ್ಲಾ ದೇಶಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅಮೆರಿಕ, ಬ್ರಿಟನ್, ಫ್ರಾನ್ಸ್, ಜರ್ಮನಿ ಸೇರಿದಂತೆ ಹಲವು ಯುರೋಪಿಯನ್ ರಾಷ್ಟ್ರಗಳು ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆಯುವ ಮೂಲಕ ಇಸ್ರೇಲ್ ಕ್ರಮವನ್ನು ಸಮರ್ಥಿಸಿಕೊಂಡಿವೆ. ಅದೇ ಸಮಯದಲ್ಲಿ, ಇರಾನ್ ಮತ್ತು ಸೌದಿ ಸೇರಿದಂತೆ ಎಲ್ಲಾ ಅರಬ್ ದೇಶಗಳು ಇಸ್ರೇಲ್ ನ ಕ್ರಮವನ್ನು ತಪ್ಪು ಎಂದು ಕರೆಯುತ್ತಿವೆ.
ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್ ಅನ್ನು ನಾಶಗೈಯ್ಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಇಲ್ಲಿಯವರೆಗೂ ಇಸ್ರೇಲ್ ದಾಳಿಯಿಂದಾಗಿ ಗಾಝಾ ಪಟ್ಟಿಯಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು, ಸಾವಿನ ಸಂಖ್ಯೆ 1530 ದಾಟಿದೆ.