ಇಸ್ರೇಲ್ ವಾಯುದಾಳಿ 
ವಿದೇಶ

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಮಾಸ್ ಹಿರಿಯ ಕಮಾಂಡರ್ ಹತ್ಯೆ!

ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಗಾಜಾಪಟ್ಟಿ: ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ನುಖ್ಬಾ ಘಟಕದ ದಕ್ಷಿಣ ಖಾನ್ ಯೂನಿಸ್ ಬೆಟಾಲಿಯನ್ ಎಂದು ಕರೆಯಲ್ಪಡುವ ಕಮಾಂಡರ್ ಬಿಲ್ಲಾಲ್ ಅಲ್-ಖೆದ್ರಾ ಅವರನ್ನು ಶಿನ್ ಬೆಟ್ ಭದ್ರತಾ ಸಂಸ್ಥೆ ಮತ್ತು ಮಿಲಿಟರಿ ಗುಪ್ತಚರ ನಿರ್ದೇಶನಾಲಯದ ಗುಪ್ತಚರ ಪ್ರಯತ್ನಗಳ ನಂತರ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.

ಈತ ಕಳೆದ ವಾರಾಂತ್ಯದಲ್ಲಿ ನಿರಿಮ್ ಮತ್ತು ನಿರ್ ಓಝ್‌ ದಕ್ಷಿಣ ಸಮುದಾಯಗಳ ಮೇಲೆ ದಾಳಿಯ ನೇತೃತ್ವ ವಹಿಸಿದ್ದ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಕಿಬ್ಬುಟ್ಜ್ ನಿರಿಮ್ ಮತ್ತು ನಿರ್ ಓಜ್‌ನಲ್ಲಿನ ಬರ್ಬರ ದಾಳಿಗೆ ಆತ ಕಾರಣನಾಗಿದ್ದ ಎಂದು ಇಸ್ರೇಲ್ ರಕ್ಷಣಾ ಪಡೆ ಮಾಹಿತಿ ನೀಡಿದೆ. ಗಾಜಾ ಪಟ್ಟಿಯಲ್ಲಿ ರಾತ್ರಿಯಿಡೀ ನಡೆದ ವೈಮಾನಿಕ ದಾಳಿಯಲ್ಲಿ ಇನ್ನೂ ಹಲವಾರು ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಹಮಾಸ್ ಕಮಾಂಡ್ ಕೇಂದ್ರಗಳು, ಮಿಲಿಟರಿ ಕಾಂಪೌಂಡ್ ಗಳು, ರಾಕೆಟ್ ಲಾಂಚರ್ ಗಳು, ಟ್ಯಾಂಕ್ ವಿರೋಧಿ ಕ್ಷಿಪಣಿ ಉಡಾವಣಾ ಪೋಸ್ಟ್‌ಗಳು ಮತ್ತು ವೀಕ್ಷಣಾ ಪೋಸ್ಟ್‌ಗಳು ಸೇರಿದಂತೆ 100 ಕ್ಕೂ ಹೆಚ್ಚು ಕಡೆಗಳಲ್ಲಿ ಇಸ್ರೇಲ್ ರಕ್ಷಣಾ ಪಡೆ ಭಾನುವಾರ ರಾತ್ರಿಯಿಡೀ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!