ಪ್ಯಾಲೆಸ್ತೀನ್ ನಾಗರೀಕರು 
ವಿದೇಶ

ಗಾಜಾ ಮೇಲೆ ಇಸ್ರೇಲ್ ದಾಳಿ: 50,000 ಗರ್ಭಿಣಿಯರು, ರೋಗಿಗಳಿಗೆ ವೈದ್ಯಕೀಯ ಲಭ್ಯತೆ ಬಗ್ಗೆ ವಿಶ್ವಸಂಸ್ಥೆ ಕಳವಳ!

ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸುತ್ತಿದ್ದು ದಾಳಿಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ನಂತರ ಇಸ್ರೇಲ್ ಗಾಜಾ ಗೆ ಕುಡಿಯುವ ನೀರು, ವಿದ್ಯುತ್ ಸರಬರಾಜನ್ನು ಬಂದ್ ಮಾಡಿದೆ. ಇದರಿಂದ ಗಾಜಾದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾಷಿಂಗ್ಟನ್: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸುತ್ತಿದ್ದು ದಾಳಿಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ನಂತರ ಇಸ್ರೇಲ್ ಗಾಜಾ ಗೆ ಕುಡಿಯುವ ನೀರು, ವಿದ್ಯುತ್ ಸರಬರಾಜನ್ನು ಬಂದ್ ಮಾಡಿದೆ. ಇದರಿಂದ ಗಾಜಾದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಅಷ್ಟೇ ಅಲ್ಲದೆ, ಇಸ್ರೇಲ್ ನ ವಾಯುದಾಳಿಯಲ್ಲಿ ಗಾಜಾದಲ್ಲಿನ ನೂರಾರು ಕಟ್ಟಡಗಳು ಧರೆಗುರುಳುತ್ತಿವೆ. ಈ ದಾಳಿಯಲ್ಲಿ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಆದರೆ ಇವರಿಗೆ ಗಾಜಾದಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು 50 ಸಾವಿರಕ್ಕೂ ಹೆಚ್ಚು ಮಂದಿ ಗರ್ಭೀಣಿಯರಿದ್ದು ಅವರ ವೈದ್ಯಕೀಯ ಆರೈಕೆ ಲಭ್ಯತೆ ಕುರಿತಂತೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. 

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಇಲ್ಲಿಯವರೆಗೂ 4,200 ಮಂದಿ ಸಾವನ್ನಪ್ಪಿದ್ದರೆ, ಕೇವಲ 10 ದಿನಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಇದು ಮುಂಬರುವ ದಿನಗಳಲ್ಲಿ ನಾಗರಿಕರ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕವನ್ನು ವಿಶ್ವಸಂಸ್ಥೆ ಮಾನವ ಹಕ್ಕುಗಳ ವಕ್ತಾರರು ವ್ಯಕ್ತಪಡಿಸಿದ್ದಾರೆ.

ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳೇ ಸೇರಿದ್ದಾರೆ. ಜೊತೆಗೆ ಕನಿಷ್ಠ 11 ಪ್ಯಾಲೇಸ್ಟಿನಿಯನ್ ಪತ್ರಕರ್ತರು, 28 ವೈದ್ಯಕೀಯ ಸಿಬ್ಬಂದಿ ಮತ್ತು 14 ಅಮೆರಿಕ ಸಹೋದ್ಯೋಗಿಗಳು ಸೇರಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ ಎಷ್ಟು ಶವಗಳು ಇರಬಹುದು ಎಂಬುದು ಸ್ಪಷ್ಟವಾಗಿಲ್ಲ. ಅನೇಕ ಕುಟುಂಬಗಳು ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ಅವರ ಅನಿಶ್ಚಿತ ಭವಿಷ್ಯದ ಬಗ್ಗೆ ಭಯಭೀತರಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಮಿಲಿಟರಿ ಕಾರ್ಯಾಚರಣೆಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಗಾಜಾದ ಮೇಲಿನ ಆಕ್ರಮಣವು ನೀರು ಸರಬರಾಜು, ಆಹಾರ, ಔಷಧ ಮತ್ತು ಇತರ ಮೂಲಭೂತ ಅಗತ್ಯಗಳ ಮೇಲೆ ಪರಿಣಾಮ ಬೀರುತ್ತಿದೆ. ಹಲವಾರು ಆರೋಗ್ಯ ಸೌಲಭ್ಯಗಳು ಬಾಂಬ್ ದಾಳಿಯಿಂದ ಹಾನಿಗೊಳಗಾಗಿವೆ. ದಾಳಿಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಂದಾಜು 50,000 ಗರ್ಭಿಣಿ ಮಹಿಳೆಯರಿಗೆ, ಹಾಗೆಯೇ ದೀರ್ಘಕಾಲದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿಲ್ಲ. ವೈದ್ಯಕೀಯ ಸೌಲಭ್ಯಗಳು, ವೈದ್ಯಕೀಯ ಸಿಬ್ಬಂದಿ ಮತ್ತು ಗಾಯಗೊಂಡವರು ಮತ್ತು ರೋಗಿಗಳ ವಿರುದ್ಧದ ದಾಳಿಯನ್ನು ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT