ಸಂಗ್ರಹ ಚಿತ್ರ 
ವಿದೇಶ

ನೇಪಾಳದ ಕಠ್ಮಂಡುವಿನಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು

ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ.

ಕಠ್ಮಂಡು (ನೇಪಾಳ): ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ.

ಇಂದು ಬೆಳಿಗ್ಗೆ 7.39ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಧಾಡಿಂಗ್​ನಲ್ಲಿದೆ ಎಂದು ತಿಳಿದುಬಂದಿದೆ.

ಬಾಗ್ಮತಿ ಹಾಗೂ ಗಂಡಕಿ ಪ್ರಾಂತ್ಯದ ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ. ಕಂಪನದಿಂದ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಟಿಬೆಟ್ ಹಾಗೂ ಭಾರತೀಯ ಟೆಕ್ಟೋನಿಕ್ ಪ್ಲೇಟ್​ಗಳು ಸಂಧಿಸುವ ಸ್ಥಳದಲ್ಲಿ ಅಪ್ಪಳಿಸಿದೆ.

ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಾಗಿದೆ. ಇದು ಟಿಬೆಟಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್‌ಗಳು ಸಂಧಿಸುವ ಪರ್ವತಶ್ರೇಣಿಯ ಮೇಲೆ ನೆಲೆಗೊಂಡಿದೆ ಮತ್ತು ಪ್ರತಿ ಶತಮಾನಕ್ಕೂ ಎರಡು ಮೀಟರ್‌ಗಳಷ್ಟು ಒಂದಕ್ಕೊಂದು ಹತ್ತಿರವಾಗುತ್ತವೆ.

ಇದು ಭೂಕಂಪನಗಳ ರೂಪದಲ್ಲಿ ಬಿಡುಗಡೆಯಾಗುವ ಒತ್ತಡಕ್ಕೆ ಕಾರಣವಾಗುತ್ತದೆ. 2015ರಲ್ಲಿ ನೇಪಾಳದಲ್ಲಿ 7.8 ತೀವ್ರತೆಯ ಭೂಕಂಪನ ಉಂಟಾಗಿತ್ತು. ಇದರಲ್ಲಿ 9,000 ಮಂದಿ ಸಾವನ್ನಪ್ಪಿದ್ದರು. PDNA ವರದಿಯಂತೆ ನೇಪಾಳವು ವಿಶ್ವದ 11ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...