ದಾಳಿಯಲ್ಲಿ ಗಾಯಗೊಂಡ ವ್ಯಕ್ತಿ 
ವಿದೇಶ

ಗಾಜಾ ಸಾವಿನ ಸಂಖ್ಯೆ 5,500ಕ್ಕೆ ಏರಿಕೆ, ಅವರಲ್ಲಿ ಅರ್ಧದಷ್ಟು ಮಕ್ಕಳು!

ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಸಾವಿಗೀಡಾದವರ ಸಂಖ್ಯೆ 5500ಕ್ಕೆ ಏರಿದ್ದು, ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ ಎಂಬ ಆಘಾತಕಾರಿ ಮಾಹಿತಿ ಮಂಗಳವಾರ ಹೊರ ಬಿದ್ದಿದೆ.

ಗಾಜಾ: ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಸಾವಿಗೀಡಾದವರ ಸಂಖ್ಯೆ 5500ಕ್ಕೆ ಏರಿದ್ದು, ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ ಎಂಬ ಆಘಾತಕಾರಿ ಮಾಹಿತಿ ಮಂಗಳವಾರ ಹೊರ ಬಿದ್ದಿದೆ.

ಇಸ್ರೇಲ್ ವೈಮಾನಿಕ ದಾಳಿಯನ್ನು ಮುಂದುವರೆಸಿದ್ದು, ಯುದ್ಧ ಪ್ರಾರಂಭವಾದಾಗಿನಿಂದ ಈ ಪ್ರದೇಶದಲ್ಲಿ 5,791 ಜನ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಗಾಜಾ ಪಟ್ಟಿಯಲ್ಲಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಘರ್ಷದಲ್ಲಿ 2,360 ಮಕ್ಕಳು ಸಾವನ್ನಪ್ಪಿದ್ದು, ಅಕ್ಟೋಬರ್ 7 ರಂದು ಯುದ್ಧ ಆರಂಭವಾದ ನಂತರ ಒಟ್ಟು 16,297 ಜನ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಹಮಾಸ್ ಸೋಮವಾರ ಗಾಜಾದಲ್ಲಿ ಒತ್ತೆಯಾಳಾಗಿದ್ದ ಇಬ್ಬರು ಇಸ್ರೇಲಿ ಮಹಿಳೆಯರನ್ನು ಬಿಡುಗಡೆ ಮಾಡಿದ್ದು, ಅವರನ್ನು ನುರಿಟ್ ಕೂಪರ್ (79 ವರ್ಷ) ಮತ್ತು ಯೋಚೆವೆಡ್ ಲಿಫ್ಶಿಟ್ಜ್ (85 ವರ್ಷ) ಎಂದು ಗುರುತಿಸಲಾಗಿದೆ. ಇಸ್ರೇಲ್ ಪ್ರಕಾರ, ಹಮಾಸ್ ಉಗ್ರರು 200 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಹಿಡಿದಿಟ್ಟುಕೊಂಡಿದ್ದಾರೆ.

ಯುದ್ಧದಿಂದಾಗಿ ಗಾಜಾದಲ್ಲಿ ಮಾನವೀಯ ಬಿಕ್ಕಟ್ಟು ತಲೆದೋರಿದೆ. ಭಾರತ ಸೇರಿದಂತೆ ಅನೇಕ ಕಡೆಯಿಂದ ಮಾನವೀಯ ಮತ್ತು ವೈದ್ಯಕೀಯ ನೆರವು ಗಾಜಾವನ್ನು ತಲುಪಿದೆ. ಆದರೆ ಅಲ್ಲಿ ಕುಡಿಯುವ ನೀರಿಗೆ ಇನ್ನೂ ಸಹ ಹಾಹಾಕಾರ ಇದೆ. ಯಾವುದೇ ಟ್ರಕ್‌ಗಳು ಇಂಧನ ಪೂರೈಸುತ್ತಿಲ್ಲ. ಆಸ್ಪತ್ರೆಗಳು ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT