ಸಂಬಂಧಿಕರನ್ನು ಕಳೆದುಕೊಂಡು ರೋಧಿಸುತ್ತಿರುವ ಪ್ಯಾಲೇಸ್ಟಿನಿಯನ್ನರು. 
ವಿದೇಶ

ಹಮಾಸ್ ವಿರುದ್ಧ ಮುಂದುವರೆದ ಇಸ್ರೇಲ್ ದಾಳಿ: ಗಾಜಾಪಟ್ಟಿಯಲ್ಲಿ 8 ಸಾವಿರಕ್ಕೂ ಹೆಚ್ಚು ಸಾವು!

ಹಮಾಸ್ ವಿರುದ್ಧ ಇಸ್ರೇಲ್ ದಾಳಿ ಮತ್ತಷ್ಟು ತೀವ್ರಗೊಂಡಿದ್ದು, ಈ ಯುದ್ಧದಲ್ಲಿ ಇದುವರೆಗೂ ಪ್ಯಾಲಿಸ್ಟೈನ್​ನಲ್ಲಿ ಸುಮಾರು 8ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ದೇರ್ ಅಲ್-ಬಲಾಹ್: ಹಮಾಸ್ ವಿರುದ್ಧ ಇಸ್ರೇಲ್ ದಾಳಿ ಮತ್ತಷ್ಟು ತೀವ್ರಗೊಂಡಿದ್ದು, ಈ ಯುದ್ಧದಲ್ಲಿ ಇದುವರೆಗೂ ಪ್ಯಾಲಿಸ್ಟೈನ್​ನಲ್ಲಿ ಸುಮಾರು 8ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಗಾಜಾಪಟ್ಟಿ ಮೇಲೆ ಇಸ್ರೇಲ್ ಬಾಂಬ್​ ದಾಳಿಯನ್ನು ಮುಂದುವರೆಸಿದ್ದು, ಹಮಾಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ.ಹಮಾಸ್​​​ನ ಮೆಟ್ರೋ ಸುರಂಗಗಳನ್ನು ಟಾರ್ಗೆಟ್ ಮಾಡಿರುವ ಇಸ್ರೇಲ್ ಪಡೆಗಳು ವಾಯು ದಾಳಿಯ ಜತೆ ಎಚ್ಚರಿಕೆಯ ಭೂ ದಾಳಿ ನಡೆಸುತ್ತಿದೆ. ಪರಿಣಾಮ 8ಸಾವಿರಕ್ಕೂ ಹೆಚ್ಚು ಪ್ಯಾಲಿಸ್ಟೈನಿಯನ್ನರು ಪ್ರಾಣ ಕಳೆದುಕೊಂಡಿದ್ದಾರೆಂದು ಗಾಜಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಹಮಾಸ್​ ದಾಳಿಯಲ್ಲಿ 1400 ಇಸ್ರೇಲಿಗಳು ಮೃತಪಟ್ಟಿದ್ದಾರೆ. ಒಟ್ಟಾರೆ ಈ ಯುದ್ಧದಲ್ಲಿ ಇದುವರೆಗೂ ಅಂದಾಜು 10 ಸಾವಿರ ಪ್ರಾಣಗಳು ಬಲಿಯಾಗಿವೆ. ಈ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ತುರ್ತು ಕದನ ವಿರಾಮ ಘೋಷಣೆ ಮಾಡುವಂತೆ ವಿಶ್ವಸಂಸ್ಥೆ ನಿರ್ಣಯ ಅಂಗೀಕರಿಸಿದ್ದರೂ ಇದಕ್ಕೆ ಬಗ್ಗದ ಇಸ್ರೇಲ್​ ಹಮಾಸ್ ವಿರುದ್ಧ ಯುದ್ಧವನ್ನು ಮುಂದುವರೆಸಿದೆ. ಇಸ್ರೇಲ್​ ಗಾಜಾಪಟ್ಟಿಗೆ ಇರುವ ಎಲ್ಲ ಸಂಪರ್ಕಗಳನ್ನು ತೆಗೆದು ಹಾಕುವ ದಾಳಿಯನ್ನು ಮುಂದುವರೆಸಿದೆ,

ಈ ನಡುವೆ ಹೆಚ್ಚಿನ ಗಾಜಾ ನಿವಾಸಿಗಳು ಯುದ್ಧದಿಂದಾಗಿ ಗಾಜಾದಾ ದಕ್ಷಿಣ ಭಾಗಕ್ಕೆ ಪಲಾಯನ ಮಾಡಿದ್ದಾರೆ ಎಂದು ಇಸ್ರೇಲ್​ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT