ವಿದೇಶ

ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೀಕರ ಭೂಕಂಪನ: 632 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

Shilpa D

ರಬಾತ್‌: ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು 632 ಜನರು ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ಮನೆಗಳು, ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಎಂದು ಮೊರಾಕ್ಕೊ ಪೊಲೀಸರು ಹೇಳಿದ್ದಾರೆ.

ಮರ್ರಾಕೆಚ್‌ನ ನೈಋತ್ಯ ಭಾಗ ಭೂಕಂಪನಕ್ಕೆ ಗುರಿಯಾಗುವ ಪ್ರದೇಶವಾಗಿದೆ. 2004ರಲ್ಲಿ ಈಶಾನ್ಯ ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ 628 ಮಂದಿ ಮೃತಪಟ್ಟಿದ್ದರು.

ಸುದ್ದಿ ಸಂಸ್ಥೆಗಳ ಪ್ರಕಾರ, ಭೀಕರ ಭೂಕಂಪದಿಂದಾಗಿ ಹಲವು ಹಳೆಯ ಕಟ್ಟಡಗಳು ಕುಸಿದಿವೆ. ನಗರದಲ್ಲಿ ಆಂಬ್ಯುಲೆನ್ಸ್ ಹಾಗೂ ತುರ್ತು ಸೇವೆಗಳ ಕೊರತೆ ಕೂಡ ಕಾಡಿದೆ. ಮತ್ತೆ ಭೂಕಂಪನದ ಭೀತಿಯಿಂದ ಜನರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಭೂಕಂಪವು ಎಷ್ಟು ಪ್ರಬಲವಾಗಿದೆಯೆಂದರೆ, ಕೇಂದ್ರಬಿಂದುವಾದ ಮರ್ರಾಕೇಶ್‌ನಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ರಬಾತ್‌ನಲ್ಲಿಯೂ ಇದರ ಪ್ರಭಾವ ಕಂಡುಬಂದಿದೆ.

SCROLL FOR NEXT