ಸಂಗ್ರಹ ಚಿತ್ರ 
ವಿದೇಶ

ಭಾರತದೊಂದಿಗಿನ ಸಂಬಂಧ ಅತ್ಯಂತ ಪ್ರಮುಖ, ಆದರೆ ಆರೋಪ ಸಾಬೀತಾದರೆ... ಕೆನಡಾ ಸಚಿವ ಹೇಳಿದ್ದೇನು?

ಭಾರತ ಮತ್ತು ಕೆನಡಾ ಜೊತೆಗಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ನಡುವಲ್ಲೇ ಭಾರತದೊಂದಿಗಿನ ಸಂಬಂಧ ಅತ್ಯಂತ ಪ್ರಮುಖ ಎಂದು ಕೆನಡಾದ ರಕ್ಷಣಾ ಸಚಿವ ಬಿಲ್ ಬ್ಲೇರ್ ಅವರು ಹೇಳಿದ್ದಾರೆ.

ಒಟ್ಟಾವ: ಭಾರತ ಮತ್ತು ಕೆನಡಾ ಜೊತೆಗಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ನಡುವಲ್ಲೇ ಭಾರತದೊಂದಿಗಿನ ಸಂಬಂಧ ಅತ್ಯಂತ ಪ್ರಮುಖ ಎಂದು ಕೆನಡಾದ ರಕ್ಷಣಾ ಸಚಿವ ಬಿಲ್ ಬ್ಲೇರ್ ಅವರು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಭಾರತದೊಂದಿಗಿನ ಕೆನಡಾ ಸಂಬಂಧವನ್ನು ಅತ್ಯಂತ ಪ್ರಮುಖ ಎಂದ ಹೇಳಿದರು.

ನಿಜ್ಜರ್ ಹತ್ಯೆ ಕುರಿತ ಆರೋಪಗಳ ತನಿಖೆ ನಡೆಯುತ್ತಿದ್ದು, ಕೆನಡಾವು ಭಾರತದ ಜೊತೆಗಿನ ಪಾಲುದಾರಿಕೆಗಳನ್ನು ಮುಂದುವರಿಸಲಿದೆ. ಭಾರತದೊಂದಿಗಿನ ನಮ್ಮ ಬಾಂಧವ್ಯಕ್ಕೆ ಸಂಬಂಧಿಸಿದಂತೆ ಇದು ಸವಾಲಿನ ಸಮಸ್ಯೆಯಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ’ ಎಂದು ತಿಳಿಸಿದರು.

‘ಭಾರತದ ಜೊತೆ ಉತ್ತಮ ಬಾಂಧವ್ಯದ ಜೊತೆ ನಾವು ಕಾನೂನು, ನಾಗರಿಕರನ್ನು ರಕ್ಷಿಸುವ ಜವಾಬ್ದಾರಿಯನ್ನೂ ಹೊಂದಿದ್ದೇವೆ. ನಾವು ಸಂಪೂರ್ಣ ತನಿಖೆಯನ್ನು ನಡೆಸಿ ಸತ್ಯವನ್ನು ಖಚಿತಪಡಿಸಿಕೊಳ್ಳುತ್ತೇವೆ. ಆರೋಪಗಳು ನಿಜವೆಂದು ಸಾಬೀತಾದರೆ, ಕೆನಡಾದ ನೆಲದಲ್ಲಿ ಕೆನಡಾದ ಪ್ರಜೆಯ ಹತ್ಯೆಯು ನಮ್ಮ ಸಾರ್ವಭೌಮತ್ವದ ಉಲ್ಲಂಘನೆಯಾಗುತ್ತದೆ. ಕೆನಡಾವು ಆ ಬಗ್ಗೆ ಬಹಳ ಮಹತ್ವದ ಕಾಳಜಿಯನ್ನು ಹೊಂದಿದೆ ಎಂದರು. ಇದೇ ವೇಳೆ ಇಂಡೊ-ಪೆಸಿಫಿಕ್ ಕಾರ್ಯತಂತ್ರವು ಕೆನಡಾಕ್ಕೆ ಇನ್ನೂ ನಿರ್ಣಾಯಕವಾಗಿದೆ ಎಂದೂ ಹೇಳಿದರು.

ಪಂಜಾಬ್‌ನ ಜಲಂಧರ್‌ ನಿವಾಸಿ ಹರ್ದೀಪ್ ಸಿಂಗ್ ನಿಜ್ಜರ್, ಕೆನಡಾ ದೇಶಕ್ಕೆ ಪರಾರಿಯಾಗಿದ್ದನು. ಭಾರತದಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈತ, ಕೆನಡಾದಲ್ಲಿ ವಲಸೆ ಹೋಗಿ ಖಲಿಸ್ತಾನ್‌ ಉಗ್ರರ ನಾಯಕನಾಗಿದ್ದ. ಕೆನಡಾ ದೇಶದ ಸರ್ರೆ ಎನ್ನುವ ಪ್ರದೇಶದಲ್ಲಿರುವ ಗುರುದ್ವಾರದ ಹೊರಗೆ 2023ರ ಜುಲೈ 18 ರಂದು ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಈತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಗುಂಪಿನ ಮುಖಂಡ ಹರ್ದೀಪ್‌ ಸಿಂಗ್ ನಿಜ್ಜರ್‌ನ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಕೆನಡಾ ಸಂಸತ್‌ನಲ್ಲೇ ಗಂಭೀರ ಆರೋಪ ಮಾಡಿದ್ದರು. ಆ ಹೇಳಿಕೆಯ ಬಳಿಕ ಭಾರತ-ಕೆನಡಾ ನಡುವೆ ಶೀತಲ ಸಮರ ಆರಂಭವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT