ಬಾಂಗ್ಲಾದೇಶದಲ್ಲಿ ಪ್ರತಿಭಟನೆ-ಹಿಂಸಾಚಾರ (ಸಂಗ್ರಹ ಚಿತ್ರ) online desk
ವಿದೇಶ

ಬಾಂಗ್ಲಾದಲ್ಲಿ ಆಡಳಿತ ಪಕ್ಷದ ಬೆಂಬಲಿಗರು- ಪ್ರತಿಭಟನಾ ನಿರತರ ನಡುವೆ ಭುಗಿಲೆದ್ದ ಹಿಂಸಾಚಾರ: 100 ಕ್ಕೂ ಹೆಚ್ಚು ಮಂದಿ ಸಾವು!

ಇದುವರೆಗೆ ಬಾಂಗ್ಲಾದೇಶದಾದ್ಯಂತ 13 ಜಿಲ್ಲೆಗಳಲ್ಲಿ ನಡೆದ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಥಮ್ ಅಲೋ ಪತ್ರಿಕೆ ವರದಿ ಮಾಡಿದೆ.

ಢಾಕ: ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಭುಗಿಲೆದ್ದಿದ್ದು, 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಕರೆ ನೀಡಲಾಗಿರುವ ಅಸಹಕಾರ ಚಳುವಳಿಯ ಮೊದಲ ದಿನ 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸರ್ಕಾರದ ರಾಜೀನಾಮೆಗೆ ಆಗ್ರಹಿಸಿ ಅಸಹಕಾರ ಚಳುವಳಿಗೆ ಕರೆ ನೀಡಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ ಬೆನ್ನಲ್ಲೆ ಅವಾಮಿ ಲೀಗ್ ನ ಬೆಂಬಲಿಗರು, ಛಾತ್ರಾ ಲೀಗ್ ಹಾಗೂ ಜುಬೋ ಲೀಗ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.

ಇದುವರೆಗೆ ಬಾಂಗ್ಲಾದೇಶದಾದ್ಯಂತ 13 ಜಿಲ್ಲೆಗಳಲ್ಲಿ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಥಮ್ ಅಲೋ ಪತ್ರಿಕೆ ವರದಿ ಮಾಡಿದೆ.

ಪೇನಿಯಲ್ಲಿ ಕನಿಷ್ಠ 5 ಜನರು, ಸಿರಾಜ್‌ಗಂಜ್‌ನಲ್ಲಿ 4, ಮುನ್ಷಿಗಂಜ್‌ನಲ್ಲಿ 3, ಬೋಗುರಾದಲ್ಲಿ 3, ಮಗೂರದಲ್ಲಿ 3, ಭೋಲಾದಲ್ಲಿ 3, ರಂಗ್‌ಪುರದಲ್ಲಿ 3, ಪಬ್ನಾದಲ್ಲಿ 2, ಸಿಲ್ಹೆಟ್‌ನಲ್ಲಿ 2, ಕೊಮಿಲ್ಲಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಪತ್ರಿಕೆ ಹೇಳಿದೆ. ಜಾಯ್‌ಪುರಹತ್‌ನಲ್ಲಿ ಒಂದು, ಢಾಕಾದಲ್ಲಿ ಒಂದು ಮತ್ತು ಬಾರಿಸಾಲ್‌ನಲ್ಲಿ ಒಂದು ಸಾವು ವರದಿಯಾಗಿದೆ.

ಪ್ರತಿಭಟನೆ-ಹಿಂಸಾಚಾರ ಹಿನ್ನೆಲೆಯಲ್ಲಿ ಭಾನುವಾರ ಸಂಜೆ 6 ಗಂಟೆಯಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಕರ್ಫ್ಯೂ ಹೇರಲು ಗೃಹ ಸಚಿವಾಲಯ ನಿರ್ಧರಿಸಿದೆ. ಸರ್ಕಾರಿ ಏಜೆನ್ಸಿಯೊಂದು ಮೆಟಾ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಮೆಸೆಂಜರ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್ ಅನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ.

4G ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸುವಂತೆ ಮೊಬೈಲ್ ಆಪರೇಟರ್‌ಗಳಿಗೆ ಆದೇಶಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕೇಂದ್ರ ಅದೊಂದು ಕೆಲಸ ಮಾಡದಿದ್ದರೆ... PoK ಜಮ್ಮು ಮತ್ತು ಕಾಶ್ಮೀರದೊಂದಿಗೆ ಸೇರುತ್ತಿತ್ತು': ಒಮರ್ ಅಬ್ದುಲ್ಲಾ

ನಾನು ಪ್ರಶಾಂತ್ ಕಿಶೋರ್ ರಾಜಕೀಯ ಬೆಂಬಲಿಸುತ್ತೇನೆ, ಆದರೆ ಅವರ ಭವಿಷ್ಯ ಸವಾಲಿನಿಂದ ಕೂಡಿದೆ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ತಮಿಳುನಾಡು: 80ನೇ ಸ್ವಾತಂತ್ರೋತ್ಸವ, ಧ್ವಜಾರೋಹಣ ವೇಳೆ ಸಿಎಂ ವಿಜಯ್‌ಗೆ ಸಲ್ಯೂಟ್ ಮಾಡಿದ ಆಪ್ತ ಗೆಳತಿ ತ್ರಿಶಾ ಕೃಷ್ಣನ್! Video ವೈರಲ್