ಸಾಂದರ್ಭಿಕ ಚಿತ್ರ 
ವಿದೇಶ

ಢಾಕಾದಲ್ಲಿ ಭಾರತೀಯ ವೀಸಾ ಕೇಂದ್ರ ಪುನರಾರಂಭ; ಸೀಮಿತ ಕಾರ್ಯಾಚರಣೆ

ಪತ್ರಿಕಾ ಪ್ರಕಟಣೆಯಲ್ಲಿ, ಭಾರತೀಯ ವೀಸಾ ಅರ್ಜಿ ಕೇಂದ್ರ(IVAC) ತನ್ನ ಢಾಕಾ ಕೇಂದ್ರದಲ್ಲಿ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದೆ.

ಢಾಕಾ: ಬಾಂಗ್ಲಾದೇಶದಲ್ಲಿ ನಾಗರಿಕ ದಂಗೆಯ ನಂತರ ಭಾರತೀಯ ವೀಸಾ ಅರ್ಜಿ ಕೇಂದ್ರವು ಮಂಗಳವಾರ "ಸೀಮಿತ ಕಾರ್ಯಾಚರಣೆಗಳನ್ನು" ಪುನರಾರಂಭಿಸಿದೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ನಾಗರಿಕ ದಂಗೆಯ ನಂತರ 76 ವರ್ಷದ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ, ಭಾರತೀಯ ವೀಸಾ ಅರ್ಜಿ ಕೇಂದ್ರ(IVAC) ತನ್ನ ಢಾಕಾ ಕೇಂದ್ರದಲ್ಲಿ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದೆ.

"IVAC(JFP) ಢಾಕಾ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸಿದೆ. ಪಾಸ್‌ಪೋರ್ಟ್‌ಗಳ ಸಂಗ್ರಹಣೆಗೆ ಸಂಬಂಧಿಸಿದಂತೆ ವೈಯಕ್ತಿಕ ಅರ್ಜಿದಾರರಿಗೆ ಸಂದೇಶಗಳನ್ನು ಕಳುಹಿಸಲಾಗುತ್ತದೆ" ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸೀಮಿತ ಕಾರ್ಯಾಚರಣೆಗಳ ಕಾರಣ, ಪ್ರಕ್ರಿಯೆಯು ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಹೀಗಾಗಿ ಅರ್ಜಿದಾರರು ತಮ್ಮ ಪಾಸ್‌ಪೋರ್ಟ್‌ಗಳನ್ನು ಪಡೆಯಲು ಟೆಕ್ಸ್ಟ್ ಮೆಸೇಜ್ ಸ್ವೀಕರಿಸಿದ ನಂತರವೇ ವೀಸಾ ಕೇಂದ್ರಕ್ಕೆ ಆಗಮಿಸುವಂತೆ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!