ಗೀತಾಂಜಲಿ ಬರುವಾ ಅವರನ್ನು ಮರಕ್ಕೆ ಕಟ್ಟಿ ಹಾಕಿರುವುದು 
ವಿದೇಶ

ಇನ್ನೂ ಸಹಜ ಸ್ಥಿತಿಗೆ ಬಾರದ ಬಾಂಗ್ಲಾದೇಶ; ಪತ್ರಕರ್ತರ ಬಂಧನ, ಹಿಂದೂ ಶಿಕ್ಷಕರ ರಾಜೀನಾಮೆಗೆ ಒತ್ತಡ

ಮಾಜಿ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಆಡಳಿತಕ್ಕೆ ನಿಕಟವಾಗಿದ್ದ ಪತ್ರಕರ್ತರನ್ನು ಅಪರಾಧಿಗಳೆಂದು ಪರಿಗಣಿಸಲಾಗುತ್ತಿದೆ.

ನವದೆಹಲಿ: ಸುಮಾರು ಎರಡು ವಾರಗಳ ಹಿಂದೆ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದ್ದರೂ, ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ. ಪತ್ರಕರ್ತರನ್ನು ಬಂಧಿಸಲಾಗುತ್ತಿದೆ ಮತ್ತು ಹಿಂದೂ ಶಿಕ್ಷಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ.

ಇದಲ್ಲದೆ, ವಿದ್ಯಾರ್ಥಿಗಳು ಜಾಗೃತ ಗುಂಪುಗಳನ್ನು ರಚಿಸಿಕೊಂಡಿದ್ದು, ತಮ್ಮನ್ನು ಹೇಗೆ ನಡೆಸಿಕೊಳ್ಳಬೇಕೆಂದು ನಾಗರಿಕರಿಗೆ ಉಪದೇಶ ನೀಡುತ್ತಿದ್ದಾರೆ. ಮಾಜಿ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಆಡಳಿತಕ್ಕೆ ನಿಕಟವಾಗಿದ್ದ ಪತ್ರಕರ್ತರನ್ನು ಅಪರಾಧಿಗಳೆಂದು ಪರಿಗಣಿಸಲಾಗುತ್ತಿದೆ.

ಖಾಸಗಿ ಚಾನೆಲ್‌ನ ಮಾಜಿ ಸಂಪಾದಕ ಶಕೀಲ್ ಅಹ್ಮದ್ ಮತ್ತು ಅವರ ಪತ್ನಿ ಫರ್ಜಾನಾ ರೂಪಾ ಹಾಗೂ ಮತ್ತೊಬ್ಬ ಪತ್ರಕರ್ತರನ್ನು ಬುಧವಾರ ಫ್ರಾನ್ಸ್‌ಗೆ ತೆರಳಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಏತನ್ಮಧ್ಯೆ, ವಿವಿಧ ಶಾಲಾ-ಕಾಲೇಜುಗಳ ಸುಮಾರು 70 ಹಿಂದೂ ಶಿಕ್ಷಕರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇವರಲ್ಲಿ ಅಜೀಂಪುರ ಸರ್ಕಾರಿ ಬಾಲಕಿಯರ ಶಾಲೆ ಮತ್ತು ಕಾಲೇಜಿನ ಪ್ರಾಂಶುಪಾಲೆ ಗೀತಾಂಜಲಿ ಬರುವಾ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಮರಕ್ಕೆ ಕಟ್ಟಿ ಹಾಕಿದ್ದರು. ಸೇನೆ ಮಧ್ಯಪ್ರವೇಶಿಸಿ ಅವರನ್ನು ರಕ್ಷಿಸಿದೆ.

ಅದೇ ರೀತಿ ಮತ್ತೊಬ್ಬ ಹಿಂದೂ ಶಿಕ್ಷಕಿ ಸೋನಾಲಿ ರಾಣಿ ದಾಸ್ ಅವರಿಗೂ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗಿದ್ದು, ಅವರು ಹಾಲಿ ರೆಡ್ ಕ್ರೆಸೆಂಟ್ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

"ಈ ಎಲ್ಲಾ ಘಟನೆಗಳನ್ನು ಗಮನಿಸಿದರೆ ಬಾಂಗ್ಲಾದೇಶ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ. ಜನರು ತಮ್ಮ ಹಿಂದಿನ ದಿನಚರಿಗೆ ಮರಳಲು ಮನೆಗಳಿಂದ ಹೊರಬರುತ್ತಿದ್ದರೂ ಉದ್ವಿಗ್ನತೆ ಇದೆ" ಎಂದು ರಾಜಕೀಯ ವಿಶ್ಲೇಷಕ ಪ್ರೊಫೆಸರ್ ನಜ್ಮುಲ್ ಅಹ್ಸಾನ್ ಕಲ್ಲಿಲ್ಮುಲ್ಲಾ ಅವರು ದಿ ನ್ಯೂ ಇಂಡಿಯನ್‌ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT