ಬಲೂಚಿಸ್ತಾನದಲ್ಲಿ ಉಗ್ರರ ದಾಳಿ 
ವಿದೇಶ

Pakistan: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ, 31 ಮಂದಿ ಸಾವು

ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 31 ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ ನಡೆಸಿ 31 ಮಂದಿಯನ್ನು ಕೊಂದು ಹಾಕಿದ್ದಾರೆ.

ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 31 ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ.

ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಶಸ್ತ್ರಸಜ್ಜಿತ ಪುರುಷರು ಹೆದ್ದಾರಿಯನ್ನು ತಡೆದು, ವಾಹನಗಳನ್ನು ಅಡ್ಡಿಪಡಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಗುರುತಿನ ಚೀಟಿ ತಪಾಸಣೆ ಮಾಡಿ ಗುಂಡಿಟ್ಟು ಪ್ರಯಾಣಿಕರನ್ನು ಕೊಂದು ಹಾಕಿದ್ದಾರೆ.

ಅಲ್ಲದೆ ಹತ್ಯೆಯ ನಂತರ, ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಹತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಕರೆದಿದ್ದು, ಸೂಕ್ತ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆಯೂ ಕೂಡ ಬಲೂಚಿನಸ್ತಾನದಲ್ಲಿ ಪಂಜಾಬ್‌ನ ಜನರನ್ನು ಗುರಿಯಾಗಿಸಿಕೊಂಡು ಹಲವು ದಾಳಿಗಳು ನಡೆದಿದ್ದು, ಸುಮಾರು ನಾಲ್ಕು ತಿಂಗಳ ನಂತರ ಮುಸಾಖೆಲ್ ನಲ್ಲಿ ಇಂತಹುದೇ ದಾಳಿ ನಡೆದಿತ್ತು. ಏಪ್ರಿಲ್‌ನಲ್ಲಿ, ನೋಶ್ಕಿ ಬಳಿ ಒಂಬತ್ತು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿ ಅವರ ಗುರುತಿನ ಚೀಟಿಗಳನ್ನು ನೋಡಿದ ನಂತರ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದು ಹಾಕಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಲೂಚಿಸ್ತಾನದ ಕೆಚ್ ಜಿಲ್ಲೆಯ ಟರ್ಬತ್‌ನಲ್ಲಿ ಪಂಜಾಬ್‌ನ ಆರು ಕಾರ್ಮಿಕರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದರು. ಎಲ್ಲರೂ ದಕ್ಷಿಣ ಪಂಜಾಬ್‌ನ ವಿವಿಧ ಪ್ರದೇಶಕ್ಕೆ ಸೇರಿದವರಾಗಿದ್ದರು. ಇದೇ ರೀತಿಯ ಘಟನೆ 2015 ರಲ್ಲಿ ನಡೆದಿತ್ತು, ಮುಂಜಾನೆ ಟರ್ಬತ್ ಬಳಿ ಕಾರ್ಮಿಕರ ಶಿಬಿರದ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ್ದರಿಂದ 20 ಕಟ್ಟಡ ಕಾರ್ಮಿಕರು ಸಾವನ್ನಪ್ಪಿದರು. ಎಲ್ಲರೂ ಸಿಂಧ್, ಪಂಜಾಬ್ ಪ್ರಾಂತ್ಯದವರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್