ಹರ್ಮೀತ್ ಧಿಲ್ಲೊನ್  
ವಿದೇಶ

Donald Trump: ಸಹಾಯಕ ಅಟಾರ್ನಿ ಜನರಲ್ ಆಗಿ ಭಾರತೀಯ ಮೂಲದ ಹರ್ಮೀತ್ ಧಿಲ್ಲೊನ್ ನೇಮಕ

"ಹರ್ಮೀತ್ ಕೆ.ಧಿಲ್ಲೊನ್ ಅವರನ್ನು ಅಮೆರಿಕ ನ್ಯಾಯಾಂಗ ಇಲಾಖೆಯ ನಾಗರಿಕ ಹಕ್ಕುಗಳ ಸಹಾಯಕ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ.

ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ-ಅಮೆರಿಕನ್ ಹರ್ಮೀತ್ ಕೆ ಧಿಲ್ಲೊನ್ ಅವರನ್ನು ನ್ಯಾಯಾಂಗ ಇಲಾಖೆಯ ನಾಗರಿಕ ಹಕ್ಕುಗಳ ಸಹಾಯಕ ಅಟಾರ್ನಿ ಜನರಲ್ ಆಗಿ ನೇಮಕ ಮಾಡಿದ್ದಾರೆ.

"ಹರ್ಮೀತ್ ಕೆ.ಧಿಲ್ಲೊನ್ ಅವರನ್ನು ಅಮೆರಿಕ ನ್ಯಾಯಾಂಗ ಇಲಾಖೆಯ ನಾಗರಿಕ ಹಕ್ಕುಗಳ ಸಹಾಯಕ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲು ನನಗೆ ತುಂಬಾ ಸಂತೋಷವಾಗುತ್ತಿದೆ" ಎಂದು ಟ್ರಂಪ್ ಸೋಮವಾರ ತಮ್ಮ ಮಾಲೀಕತ್ವದ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಖ್ ಸಮುದಾಯಕ್ಕೆ ಸೇರಿದ ಚಂಡೀಗಢ ಮೂಲದ ಧಿಲ್ಲೊನ್ ಅವರು, ಡಾರ್ಟ್‌ಮೌತ್ ಕಾಲೇಜ್ ನಿಂದ ಪದವಿ ಮತ್ತು ವರ್ಜೀನಿಯಾ ಲಾ ಸ್ಕೂಲ್ ನಿಂದ ಕಾನೂನು ಪದವಿ ಪಡೆದಿದ್ದಾರೆ. ಅಮೆರಿಕದ ನಾಲ್ಕನೇ ಸರ್ಕ್ಯೂಟ್ ಕೋರ್ಟ್ ಆಫ್ ಅಪೀಲ್ಸ್‌ನಲ್ಲಿ ನ್ಯಾಯಿಕ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

"ತಮ್ಮ ವೃತ್ತಿಜೀವನದುದ್ದಕ್ಕೂ, ಹರ್ಮೀತ್ ಧಿಲ್ಲೊನ್ ಅವರು ನಾಗರಿಕ ಹಕ್ಕುಗಳ ರಕ್ಷಣೆ, ವಾಕ್ ಸ್ವಾತಂತ್ರ್ಯ, ಉದ್ದೋಗದ ಸ್ಥಳದಲ್ಲಿ ತಾರತಮ್ಯ ನಿವಾರಣೆಗಾಗಿ ಹೋರಾಟ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?