ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಏರ್ ಸ್ಟ್ರೈಕ್ 
ವಿದೇಶ

ಅಫ್ಘಾನಿಸ್ತಾನದ ಮೇಲೆ Airstrike: 'ಪಾಕಿಸ್ತಾನ ಮುಟ್ಟಿನೋಡಿಕೊಳ್ಳುವಂತೆ ಉತ್ತರ ನೀಡುತ್ತೇವೆ'; ತಾಲಿಬಾನ್ ಶಪಥ!

ಅಫ್ಘಾನಿಸ್ತಾನದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನ ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದ್ದು, ಈ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ. ಈ

ಕಾಬುಲ್: ಆಫ್ಘಾನಿಸ್ತಾನ ಮೇಲೆ ಮತ್ತೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ತಾಲಿಬಾನ್ ಕೂಡ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವ ಕುರಿತು ಶಪಥ ಮಾಡಿದೆ.

ಅಫ್ಘಾನಿಸ್ತಾನದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನ ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದ್ದು, ಈ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ. ಈ ಪೈಕಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಡಿಸೆಂಬರ್ 24 ರ ರಾತ್ರಿ ಅಫ್ಘಾನಿಸ್ತಾನದ ಲಮನ್ ಸೇರಿದಂತೆ ಏಳು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಸೇನೆ ದಾಳಿ ನಡೆಸಿದೆ. ಪಾಕಿಸ್ತಾನದ ಫೈಟರ್ ಜೆಟ್‌ಗಳು ಈ ಬಾಂಬ್ ದಾಳಿ ನಡೆಸಿವೆ ಎಂದು ತಾಲಿಬಾನ್ ಆಡಳಿತ ಆರೋಪಿಸಿದೆ.

ಈ ವೈಮಾನಿಕ ದಾಳಿಯಲ್ಲಿ ಭಾರಿ ವಿನಾಶ ಸಂಭವಿಸಿದ್ದು, ಬರ್ಮಾಲ್‌ನ ಮುರ್ಗ್ ಬಜಾರ್ ಗ್ರಾಮವೇ ಸಂಪೂರ್ಣವಾಗಿ ನಾಶವಾಗಿದೆ. ಪಾಕಿಸ್ತಾನದ ವೈಮಾನಿಕ ದಾಳಿಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಈ ದಾಳಿಯಲ್ಲಿ ತಾಲಿಬಾನ್ ತರಬೇತಿ ಶಿಬಿರವನ್ನು ಧ್ವಂಸಗೊಳಿಸಲಾಗಿದೆ ಮತ್ತು ಅನೇಕ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನಕ್ಕೆ 'ತೆಹ್ರೀಕ್-ಎ-ತಾಲಿಬಾನ್' ಭಯ

ಇನ್ನು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿ 'ತೆಹ್ರೀಕ್-ಎ-ತಾಲಿಬಾನ್' ಉಗ್ರ ಸಂಘಟನೆಯ ಹಾವಳಿ ಹೆಚ್ಚಾಗಿದ್ದು, ಈ ಹಿಂದೆಯೂ ಕೂಡ ಪಾಕಿಸ್ತಾನ ಸೇನೆ ಗಡಿಯಲ್ಲಿ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿತ್ತು.

ಮುಟ್ಟಿನೋಡಿಕೊಳ್ಳುವಂತೆ ಉತ್ತರ ನೀಡುತ್ತೇವೆ: ತಾಲಿಬಾನ್ ಶಪಥ

ಇನ್ನು ಪಾಕಿಸ್ತಾನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ತಾಲಿಬಾನ್ ಆಡಳಿತ ಪಾಕಿಸ್ತಾನಕ್ಕೆ ಶೀಘ್ರದಲ್ಲೇ ಮುಟ್ಟಿನೋಡಿಕೊಳ್ಳುವಂತೆ ಉತ್ತರ ನೀಡುತ್ತೇವೆ ಎಂದು ಕಿಡಿಕಾರಿದೆ. 'ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರನ್ನು ಬಾಂಬ್ ದಾಳಿಗೆ ಗುರಿಪಡಿಸಲಾಗಿದೆ.

ಅಫ್ಘಾನಿಸ್ತಾನವು ತನ್ನ ಭೂಮಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವ ಸಂಪೂರ್ಣ ಹಕ್ಕನ್ನು ಹೊಂದಿದೆ. ಅಲ್ಲದೆ ಇದು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಮತ್ತು ಕ್ರೂರ ಕೃತ್ಯ ಎಂದು ತಾಲಿಬಾನ್ ಸ್ಪಷ್ಟವಾಗಿ ಹೇಳಿದೆ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT