ಪಾಕಿಸ್ತಾನ ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ 
ವಿದೇಶ

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಪೊಲೀಸ್‌ ಠಾಣೆ ಮೇಲೆ ದಾಳಿ, ಕನಿಷ್ಠ 10 ಮಂದಿ ಸಾವು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಏಕಾಏಕಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 10 ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಲಾಹೋರ್: ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಏಕಾಏಕಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 10 ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಾಯವ್ಯ ಪಾಕಿಸ್ತಾನದಲ್ಲಿನ ಪೊಲೀಸ್‌ ಠಾಣೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದು, ಕನಿಷ್ಠ 10 ಪೊಲೀಸ್‌ ಸಿಬ್ಬಂದಿ ಹತ್ಯೆಯಾಗಿದ್ದಾರೆ. ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆಗೆ ಉಗ್ರರು ಪೊಲೀಸ್‌ ಠಾಣೆಯ ಮೇಲೆ ಸ್ನೈಪರ್ ದಾಳಿ ಮಾಡಿದ್ದಾರೆ. ಬಳಿಕ ಠಾಣೆಯನ್ನು ಪ್ರವೇಶಿಸಿ ಹ್ಯಾಂಡ್ ಗ್ರೆನೇಡ್‌ಗಳನ್ನು ಎಸೆದಿದ್ದಾರೆ. ಈ ವೇಳೆ ಸಂಭವಿಸಿದ ಸ್ಫೋಟದಿಂದ ಕನಿಷ್ಠ 10 ಪೊಲೀಸ್‌ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರಾಂತ್ಯದ ದ್ರಾಬಾನ್ ಪ್ರದೇಶದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

30ಕ್ಕೂ ಹೆಚ್ಚು ಉಗ್ರರು ಮೂರೂ ದಿಕ್ಕುಗಳಿಂದ ದಾಳಿ ನಡೆಸಿದ್ದು, ಎರಡೂವರೆ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು. ದಾಳಿಯ ಹಿಂದೆ ಯಾರ ಕೈವಾಡವಿದೆ ಮತ್ತು ಇದು ಚುನಾವಣೆಗೆ ಸಂಬಂಧಿಸಿದ ದಾಳಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪೊಲೀಸ್ ಠಾಣೆಯ ಕಟ್ಟಡಕ್ಕೆ ಪ್ರವೇಶಿಸಿದ ನಂತರ, ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್‌ಗಳನ್ನು ಬಳಸಿದರು, ಇದು ಪೊಲೀಸರಿಗೆ ಹೆಚ್ಚಿನ ಸಾವುನೋವುಗಳನ್ನು ಉಂಟುಮಾಡಿತು ಎಂದು ದ್ರಾಬನ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಮಲಿಕ್ ಅನೀಸ್ ಉಲ್ ಹಸನ್ ತಿಳಿಸಿದ್ದಾರೆ.

ಇದೇ 8 ರಂದು ಪಾಕಿಸ್ತಾನ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂಸಾಚಾರದ ಘಟನೆಗಳು ಹೆಚ್ಚುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!