ಪಾಕಿಸ್ತಾನ ಸೇನೆ 
ವಿದೇಶ

ಪಾಕ್‌ನಲ್ಲಿ ಮತದಾನದ ದಿನವೇ ಭಯೋತ್ಪಾದಕರ ದಾಳಿ: 10 ಭದ್ರತಾ ಸಿಬ್ಬಂದಿ ಸೇರಿದಂತೆ 12 ಮಂದಿ ಸಾವು!

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನದ ದಿನವೇ ಭಯೋತ್ಪಾದಕರ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನದ ದಿನವೇ ಭಯೋತ್ಪಾದಕರ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಆದರೆ ಮತದಾನಕ್ಕೆ ಅಡ್ಡಿಪಡಿಸುವ ಭಯೋತ್ಪಾದಕರ 51 ದಾಳಿಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ದಾಳಿಗಳಲ್ಲಿ ಹೆಚ್ಚಿನವು ಖೈಬರ್-ಪಖ್ತುಂಖ್ವಾ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ನಡೆದಿವೆ. ಈ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರೂ ಹತರಾಗಿದ್ದಾರೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಭಯೋತ್ಪಾದಕರ ಹೆಚ್ಚಿನ ದಾಳಿಗಳು ಖೈಬರ್-ಪಖ್ತುಂಖ್ವಾ ಮತ್ತು ಬಲೂಚಿಸ್ತಾನದಲ್ಲಿ ನಡೆದಿವೆ. ಅವರು ಚುನಾವಣಾ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ಪ್ರಯತ್ನಿಸಿದರು. ಆದರೆ ಅವರ ಪ್ರಯತ್ನಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿದವು ಎಂದು ಹೇಳಿಕೆ ತಿಳಿಸಿದೆ. 

ದಾಳಿಯಲ್ಲಿ ಭದ್ರತಾ ಪಡೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ 10 ಸಿಬ್ಬಂದಿ ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಮತ್ತು 39 ಮಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT