ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ 
ವಿದೇಶ

ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಲೋಕಾರ್ಪಣೆ: ಏಕತೆ, ಸೌಹಾರ್ದತೆಯ ಸಂಕೇತ- ಪ್ರಧಾನಿ ಮೋದಿ

ಅಬುಧಾಬಿಯಲ್ಲಿ ಬುಧವಾರ ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಬುಧಾಬಿ: ಅಬುಧಾಬಿಯಲ್ಲಿ ಬುಧವಾರ ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭವ್ಯ ಮಂದಿರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಯುಎಇ ಒಂದು ಸುವರ್ಣ ಅಧ್ಯಾಯವನ್ನು ಬರೆದಿದೆ. ಹಿಂದೂ ದೇವಾಲಯ ಉದ್ಘಾಟನೆ ಹಿಂದೆ ಹಲವು ವರ್ಷಗಳ ಶ್ರಮವಿದೆ ಮತ್ತು ಅನೇಕರ ಕನಸುಗಳು ದೇವಾಲಯದೊಂದಿಗೆ ಸಂಪರ್ಕ ಹೊಂದಿದ್ದು,  ಸ್ವಾಮಿನಾರಾಯಣ ಅವರ ಆಶೀರ್ವಾದವೂ ಇದೆ. ಇದು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಿದೆ. ದೇವಾಲಯ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದರು. 

ಇದನ್ನೂ ಓದಿ: ಯುಎಇಯ ಅಬುಧಾಬಿಯಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
 
ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತಿತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಇದೀಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದು ಯುಎಇಗೆ ಬರುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ಜನರ ಸಂಪರ್ಕವೂ ಹೆಚ್ಚಾಗುತ್ತದೆ.ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ ಅಧ್ಯಕ್ಷ  ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತುಯುಎಎ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನಾ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಬಿಎಪಿಎಸ್‌ನ ಈಶ್ವರಚರಂದಾಸ್ ಸ್ವಾಮಿ ಸ್ವಾಗತಿಸಿದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆರತಿ ಮಾಡಿದರು. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ದೇವಾಲಯವನ್ನು ಉದ್ಘಾಟಿಸಲಾಯಿತು. ಅಬುಧಾಬಿಯಲ್ಲಿನ BAPS ಹಿಂದೂ ದೇವಾಲಯದ ಉದ್ಘಾಟನೆಗೂ  ಮುನ್ನ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.ಭವ್ಯವಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾ (BAPS) ಮಂದಿರ, ಅಬುಧಾಬಿಯ ಮೊದಲ ಹಿಂದೂ ದೇವಾಲಯವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಟ್ರಂಪ್ ಸುಂಕಾಸ್ತ್ರಕ್ಕೆ ಸೆಡ್ಡು: ಇಂದು ಚೀನಾ ಅಧ್ಯಕ್ಷ ಕ್ಸಿ ಜೊತೆಗೆ ಪ್ರಧಾನಿ ಮೋದಿಯ ಮಹತ್ವದ ಭೇಟಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

ಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!

'ನನ್ನನ್ನು ಬಂಡೆ ಎನ್ನುತ್ತಾರೆ- ನೀವು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥನೆ'

ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು, ಜಿಲ್ಲೆಯಾದ್ಯಂತ ಪಟಾಕಿ ಬಳಕೆ ನಿಷೇಧ!

SCROLL FOR NEXT