ಕಾರುಗಳ ನಡುವೆ ಅಪಘಾತದ ಚಿತ್ರ 
ವಿದೇಶ

ಚೀನಾ: ಹಿಮಾವೃತ ಎಕ್ಸ್‌ಪ್ರೆಸ್‌ವೇಯಲ್ಲಿ ನೂರಾರು ಕಾರುಗಳ ನಡುವೆ ಅಪಘಾತ: 9 ಮಂದಿಗೆ ಗಾಯ

ಪೂರ್ವ ಚೀನಾದ ಹಿಮಾವೃತ ಎಕ್ಸ್ ಪ್ರೆಸ್ ವೇ ನಲ್ಲಿ ಸುಮಾರು ನೂರಾರು ಕಾರುಗಳ ನಡುವೆ ಶುಕ್ರವಾರ ಅಪಘಾತ ಸಂಭವಿಸಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದಿಂದ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮವೊಂದು ವರದಿ ಮಾಡಿದೆ. ಅಪಘಾತದ ಚಿತ್ರಣದ ಫೋಟೋಗಳನ್ನು ಹಂಚಿಕೊಂಡಿದೆ.

ಬೀಜಿಂಗ್: ಪೂರ್ವ ಚೀನಾದ ಹಿಮಾವೃತ ಎಕ್ಸ್ ಪ್ರೆಸ್ ವೇ ನಲ್ಲಿ ಸುಮಾರು ನೂರಾರು ಕಾರುಗಳ ನಡುವೆ ಶುಕ್ರವಾರ ಅಪಘಾತ ಸಂಭವಿಸಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದಿಂದ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮವೊಂದು ವರದಿ ಮಾಡಿದೆ. ಅಪಘಾತದ ಚಿತ್ರಣದ ಫೋಟೋಗಳನ್ನು ಹಂಚಿಕೊಂಡಿದೆ.

ಅಧಿಕೃತ ಸುದ್ದಿ ವಾಹಿನಿ ಹಂಚಿಕೊಂಡಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪ್ರಯಾಣಿಕರ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಕಿಕ್ಕಿರಿದು ನಿಂತಿರುವುದನ್ನು ನೋಡಬಹುದಾಗಿದೆ. ಇದರಿಂದಾಗಿ ಎಕ್ಸ್ ಪ್ರೆಸ್ ವೇ ನಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು.

ಅಪಘಾತದ ಪರಿಣಾಮ ಯಾವುದೇ ಸಾವು- ನೋವುಗಳು ದಾಖಲಾಗಿಲ್ಲವಾದರೂ ಮೂವರನ್ನು ಗಾಯಗಳಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತಿತರ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯ ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

"ಇತ್ತೀಚಿನ ಮಳೆಯ ವಾತಾವರಣದಿಂದ ರಸ್ತೆಗಳು ಹದಗೆಟ್ಟಿದ್ದು, ಚಾಲಕರು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!