ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ 
ವಿದೇಶ

ಉಕ್ರೇನ್ ಗೆ ಸೇನಾಪಡೆ ಕಳುಹಿಸಿದರೆ ಪರಮಾಣು ಯುದ್ಧ: ರಷ್ಯಾ ಅಧ್ಯಕ್ಷ ಪುಟಿನ್ ಎಚ್ಚರಿಕೆ

ಉಕ್ರೇನ್‌ನಲ್ಲಿ ಹೋರಾಡಲು ತನ್ನ ಸೈನ್ಯವನ್ನು ಕಳುಹಿಸುವ ಧೈರ್ಯಮಾಡುವ ಯಾವುದೇ ಪಾಶ್ಚಿಮಾತ್ಯ ರಾಷ್ಟ್ರಗಳು "ಅಣ್ವಸ್ತ್ರ ಬಳಕೆಯ ಪರಿಣಾಮ" ಎದುರಿಸಬೇಕಾಗುತ್ತದೆ.

ಮಾಸ್ಕೋ: ಉಕ್ರೇನ್‌ನಲ್ಲಿ ಹೋರಾಡಲು ತನ್ನ ಸೈನ್ಯವನ್ನು ಕಳುಹಿಸುವ ಧೈರ್ಯಮಾಡುವ ಯಾವುದೇ ಪಾಶ್ಚಿಮಾತ್ಯ ರಾಷ್ಟ್ರಗಳು "ಅಣ್ವಸ್ತ್ರ ಬಳಕೆಯ ಪರಿಣಾಮ" ಎದುರಿಸಬೇಕಾಗುತ್ತದೆ ಎಂದು ಗುರುವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎಚ್ಚರಿಕೆ ನೀಡಿದ್ದಾರೆ.

ಇಂದು ರಷ್ಯಾ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಪುಟಿನ್, "ಪಾಶ್ಚಿಮಾತ್ಯ ದೇಶಗಳು ರಷ್ಯಾದ ಸಾಮರ್ಥ್ಯ ಕುಗ್ಗಿಸಲು ಪ್ರಯತ್ನಿಸುತ್ತಿವೆ. ಆದರೆ ರಷ್ಯಾ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದು ಎಷ್ಟು ಅಪಾಯಕಾರಿ ಎಂಬುದನ್ನು ಆ ದೇಶಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ನ್ಯಾಟೊ ಸದಸ್ಯ ರಾಷ್ಟ್ರಗಳು ಉಕ್ರೇನ್‌ಗೆ ಸೇನಾಪಡೆಗಳನ್ನುಕಳುಹಿಸಬೇಕು ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಸಲಹೆ ನೀಡಿದ್ದರು. ಮ್ಯಾಕ್ರನ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಪುಟಿನ್ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ದಿನಪತ್ರಿಕೆ ವರದಿ ಮಾಡಿದೆ.

ಅಮೆರಿಕ, ಜರ್ಮನಿ, ಬ್ರಿಟನ್ ಮತ್ತು ಇತರ ರಾಷ್ಟ್ರಗಳು, ಸೇನೆ ಕಳುಹಿಸುವ ಮ್ಯಾಕ್ರನ್ ಅವರ ಸಲಹೆಯನ್ನು ತಿರಸ್ಕರಿಸಿದ್ದರು.

"ಅವರ ಭೂಪ್ರದೇಶದ ಮೇಲೆ ದಾಳಿ ಮಾಡುವ ಶಸ್ತ್ರಾಸ್ತ್ರಗಳು ನಮ್ಮ ಬಳಿ ಇವೆ ಎಂದು ಅವರು ಅಂತಿಮವಾಗಿ ಅರಿತುಕೊಳ್ಳಬೇಕು. ಪಾಶ್ಚಿಮಾತ್ಯ ರಾಷ್ಟ್ರಗಳ ನಡೆಯು ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯೊಂದಿಗೆ ಸಂಘರ್ಷದ ನಿಜವಾದ ಬೆದರಿಕೆಯನ್ನು ಸೃಷ್ಟಿಸುತ್ತಿದೆ ಮತ್ತು ಇದರಿಂದಾಗಿ ನಾಗರಿಕತೆ ನಾಶವಾಗುತ್ತದೆ" ಎಂದು ಪುಟಿನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!