ಮೊಸ್ಸಾದ್ ಸಂಸ್ಥೆ 
ವಿದೇಶ

ಇಸ್ರೇಲ್ ಪರ ಬೇಹುಗಾರಿಕೆ ಆರೋಪ: ಟರ್ಕಿಯಲ್ಲಿ 33 ಜನರ ಬಂಧನ

ಇಸ್ರೇಲ್‌ನ ವಿದೇಶಿ ಗುಪ್ತಚರ ಸೇವೆ ಮೊಸಾದ್ ಪರವಾಗಿ ಬೇಹುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಶಂಕೆಯ ಮೇಲೆ ಟರ್ಕಿ ಅಧಿಕಾರಿಗಳು 33 ಜನರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಇಸ್ತಾನ್ ಬುಲ್: ಇಸ್ರೇಲ್‌ನ ವಿದೇಶಿ ಗುಪ್ತಚರ ಸೇವೆ ಮೊಸಾದ್ ಪರವಾಗಿ ಬೇಹುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಶಂಕೆಯ ಮೇಲೆ ಟರ್ಕಿ ಅಧಿಕಾರಿಗಳು 33 ಜನರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತು ಅನಾಡೋಲು ಸುದ್ದಿ ಸಂಸ್ಥೆ ಭದ್ರತಾ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದು, ಬಂಧಿತ ಶಂಕಿತರು ಮೊಸಾದ್ ಪರವಾಗಿ ಕಣ್ಗಾವಲು, ಹಲ್ಲೆ ಮತ್ತು ಅಪಹರಣದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಇಸ್ತಾಂಬುಲ್ ಪ್ರಾಸಿಕ್ಯೂಟರ್ ಕಚೇರಿಯ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳ ತನಿಖಾ ಬ್ಯೂರೊ ತನಿಖೆ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.

ಟರ್ಕಿಯ 8 ಪ್ರಾಂತ್ಯಗಳಲ್ಲಿನ 57 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದ ದಾಳಿಗಳಲ್ಲಿ ಶಂಕಿತರನ್ನು ಸೆರೆಹಿಡಿಯಲಾಗಿದೆ. ಉಳಿದ 13 ಶಂಕಿತರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿವೆ. ಬಂಧಿತರ ಬಗ್ಗೆ ಟರ್ಕಿ ಹೆಚ್ಚಿನ ಮಾಹಿತಿ ಬಿಟ್ಟು ಕೊಟ್ಟಿಲ್ಲ. 

ಲೆಬನಾನ್, ಟರ್ಕಿ ಮತ್ತು ಕತಾರ್ ಸೇರಿದಂತೆ ಎಲ್ಲ ಕಡೆಗಳಲ್ಲಿ ಹಮಾಸ್ ಉಗ್ರರನ್ನು ಸದೆಬಡಿಯಲು ಸಿದ್ಧವಾಗಿದ್ದೇವೆ ಎಂದು ಇಸ್ರೇಲ್‌ನ ದೇಶೀಯ ಭದ್ರತಾ ಸಂಸ್ಥೆಯ ಮುಖ್ಯಸ್ಥ ಶಿನ್ ಬೆಟ್ ಹೇಳಿಕೆ ನೀಡಿದ ವಾರಗಳ ನಂತರ ಈ ಬಂಧನದ ವರದಿ ಬಂದಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT