ಕೆಂಪು ಸಮುದ್ರದ ದೃಶ್ಯ (ಸಂಗ್ರಹ ಚಿತ್ರ) 
ವಿದೇಶ

ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ದಾಳಿ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ವಿದೇಶಾಂಗ ಸಚಿವಾಲಯ

ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರು, ಹಲವು ವಾಣಿಜ್ಯ ಹಡಗುಗಳ ಮೇಲೆ ಈ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. 

ನವದೆಹಲಿ: ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರು, ಹಲವು ವಾಣಿಜ್ಯ ಹಡಗುಗಳ ಮೇಲೆ ಈ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. 

ಹೌತಿ ಬಂಡುಕೋರರ ದಾಳಿ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರರಾದ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾತನಾಡಿದ್ದು, ನೌಕಾಯಾನ, ವಾಣಿಜ್ಯ ಸಾಗಣೆಯ ಮುಕ್ತ ಚಲನೆ ಸ್ವಾತಂತ್ರ್ಯಕ್ಕೆ ನಾವು ಹೆಚ್ಚಿನ ಮಹತ್ವ ನೀಡುತ್ತೇವೆ, ಈ ಪರಿಸ್ಥಿತಿಯ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ” ಎಂದು ಜೈಸ್ವಾಲ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

"ನಿಮಗೆ ತಿಳಿದಿರುವಂತೆ, ನಮ್ಮಲ್ಲಿ ಭಾರತೀಯ ನೌಕಾಪಡೆಯ ಹಡಗುಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ. ಅಲ್ಲಿನ ಭಾರತೀಯ ಹಡಗುಗಳ ಮೇಲೂ ನಿಗಾ ಇಡುತ್ತಿದ್ದಾರೆ”" ಎಂದು ಅವರು ಹೇಳಿದರು.

ಜೈಸ್ವಾಲ್ ಹೇಳಿಕೆಗೂ ಮುನ್ನ ಭಾರತೀಯ ನೌಕಾಪಡೆಯು ತನ್ನ ಹಡಗುಗಳು ಮತ್ತು ವಿಮಾನಗಳನ್ನು ಉತ್ತರ ಮತ್ತು ಮಧ್ಯ ಅರೇಬಿಯನ್ ಸಮುದ್ರದಲ್ಲಿ ಕಣ್ಗಾವಲಿಗಾಗಿ ಮತ್ತು ಕಡಲ ಭದ್ರತಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ನಿಯೋಜಿಸಿದೆ ಎಂದು ಹೇಳಿತ್ತು. ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಕಳೆದೆರಡು ವಾರಗಳಲ್ಲಿ ಇರಾನ್ ಬೆಂಬಲಿತ ಹೌತಿ ಉಗ್ರಗಾಮಿಗಳು ಕೆಂಪು ಸಮುದ್ರದಲ್ಲಿ ಹಲವಾರು ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT