ಪ್ರಧಾನಿ ಮೋದಿ - ಕಾರ್ಲ್ ನೆಹಮ್ಮರ್ 
ವಿದೇಶ

'ಇದು ಯುದ್ಧ ಮಾಡುವ ಸಮಯವಲ್ಲ, ಅಮಾಯಕರ ಹತ್ಯೆ ಒಪ್ಪಲಾಗದು': ಪ್ರಧಾನಿ ಮೋದಿ

ಸಮಸ್ಯೆಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಮೋದಿ, ಭಾರತ ಮತ್ತು ಆಸ್ಟ್ರಿಯಾ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತವೆ ಮತ್ತು ಅದಕ್ಕಾಗಿ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ಸಿದ್ಧ ಎಂದು ಹೇಳಿದರು.

ವಿಯೆನ್ನಾ: ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರೊಂದಿಗೆ ಉಕ್ರೇನ್ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಜಗತ್ತಿನ ಇತರ ಸಂಘರ್ಷಗಳ ಕುರಿತು "ವಿವರವಾದ ಫಲಪ್ರದ ಚರ್ಚೆ" ನಡೆಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಎರಡು ದಿನಗಳ ಭೇಟಿಗಾಗಿ ಮಂಗಳವಾರ ರಾತ್ರಿ ರಷ್ಯಾ ಆಗಮಿಸಿರುವ ಪ್ರಧಾನಿ ಮೋದಿ, ಭಾರತ ಮತ್ತು ಆಸ್ಟ್ರಿಯಾ ಪರಸ್ಪರ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಹೊಸ ಸಾಧ್ಯತೆಗಳನ್ನು ಗುರುತಿಸಿವೆ ಮತ್ತು ಮುಂಬರುವ ದಶಕದ ಸಹಕಾರಕ್ಕಾಗಿ ಒಂದು ನೀಲನಕ್ಷೆ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

"ಇಂದು, ಚಾನ್ಸೆಲರ್ ನೆಹಮ್ಮರ್ ಮತ್ತು ನಾನು ಫಲಪ್ರದವಾದ ಚರ್ಚೆ ನಡೆಸಿದ್ದೇವೆ. ನಮ್ಮ ಪರಸ್ಪರ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಾವು ಹೊಸ ಸಾಧ್ಯತೆಗಳನ್ನು ಗುರುತಿಸಿದ್ದೇವೆ. ನಮ್ಮ ಸಂಬಂಧಕ್ಕೆ ಕಾರ್ಯತಂತ್ರದ ನಿರ್ದೇಶನವನ್ನು ನೀಡಲು ನಾವು ನಿರ್ಧರಿಸಿದ್ದೇವೆ. ಮುಂಬರುವ ದಶಕದ ಸಹಕಾರಕ್ಕಾಗಿ ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆ" ಎಂದು ಪ್ರಧಾನಿ ಮೋದಿ ಅವರು ಚಾನ್ಸೆಲರ್ ನೆಹಮ್ಮರ್ ಅವರ ಮಾತುಕತೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

"ಚಾನ್ಸೆಲರ್ ನೆಹಮ್ಮರ್ ಮತ್ತು ನಾನು ಪ್ರಪಂಚದಾದ್ಯಂತ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದೇವೆ. ಅದು ಉಕ್ರೇನ್‌ ಸಂಘರ್ಷ ಅಥವಾ ಪಶ್ಚಿಮ ಏಷ್ಯಾದ ಪರಿಸ್ಥಿತಿಯಾಗಿರಬಹುದು. ಇದು ಯುದ್ಧದ ಸಮಯವಲ್ಲ ಎಂದು ನಾನು ಮೊದಲೇ ಹೇಳಿದ್ದೇನೆ" ಎಂದು ಪ್ರಧಾನಿ ಮೋದಿ ತಿಳಿಸಿದರು.

ಸಮಸ್ಯೆಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಮೋದಿ, ಭಾರತ ಮತ್ತು ಆಸ್ಟ್ರಿಯಾ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತವೆ ಮತ್ತು ಅದಕ್ಕಾಗಿ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ಸಿದ್ಧ ಎಂದು ಹೇಳಿದರು.

ಭಾರತ ಮತ್ತು ಆಸ್ಟ್ರಿಯಾ ಎರಡೂ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತವೆ ಮತ್ತು ಎಲ್ಲೇ ಆದರೂ ಅಮಾಯಕರ ಹತ್ಯೆಯನ್ನು ಒಪ್ಪಕೊಳ್ಳಲು ಸಾಧ್ಯವಿಲ್ಲ. ಭಾರತ ಮತ್ತು ಆಸ್ಟ್ರಿಯಾ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತವೆ ಮತ್ತು ಅದಕ್ಕಾಗಿ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ನಾವು ಒಟ್ಟಿಗೆ ಸಿದ್ಧರಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿಯವರ ಮಾತಿಗೆ ಧ್ವನಿಗೂಡಿಸಿದ ಆಸ್ಟ್ರಿಯಾ ಚಾನ್ಸೆಲರ್ ನೆಹಮ್ಮರ್ ಅವರು, ಆಸ್ಟ್ರಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧವನ್ನು ಎತ್ತಿ ತೋರಿಸಿದರು.

"ಭಾರತ ಮತ್ತು ಆಸ್ಟ್ರಿಯಾ ನಡುವೆ ಉತ್ತಮ ಸಂಬಂಧವಿದೆ. ಇದು 1950 ರ ದಶಕದಲ್ಲಿ ಪ್ರಾರಂಭವಾದ ನಂಬಿಕೆಯ ಸಂಬಂಧವಾಗಿದೆ... ಭಾರತವು ಆಸ್ಟ್ರಿಯಾಕ್ಕೆ ಸಹಾಯ ಮಾಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ