ಪಾಕಿಸ್ತಾನಿ ಯೂಟ್ಯೂಬರ್ ಹಸನ್ ಇಕ್ಬಾಲ್ ಚಿಶ್ತಿ 
ವಿದೇಶ

Video: ''ಶಾಲೆಗೆ ಹೋದ ಹೆಣ್ಣು ಮಕ್ಕಳು ವೇಶ್ಯೆಯರಾಗುತ್ತಾರೆ'': ಪಾಕಿಸ್ತಾನಿ ಯೂಟ್ಯೂಬರ್ Hasan Iqbal Chishti ವಿವಾದಾತ್ಮಕ ಹೇಳಿಕೆ!

ಹೆಣ್ಣು ಮಕ್ಕಳ ಶಿಕ್ಷಣವನ್ನು ಇಸ್ಲಾಂ ಒಪ್ಪಿಕೊಳ್ಳುವುದಿಲ್ಲ. ಶಾಲೆಗೆ ಹೋದ ಹೆಣ್ಣು ಮಕ್ಕಳು ವೇಶ್ಯೆಯರಾಗುತ್ತಾರೆ ಎಂದು ಪಾಕಿಸ್ತಾನಿ ಯೂಟ್ಯೂಬರ್ Hasan Iqbal Chishti ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಲಾಹೋರ್: ಹೆಣ್ಣು ಮಕ್ಕಳ ಶಿಕ್ಷಣವನ್ನು ಇಸ್ಲಾಂ ಒಪ್ಪಿಕೊಳ್ಳುವುದಿಲ್ಲ. ಶಾಲೆಗೆ ಹೋದ ಹೆಣ್ಣು ಮಕ್ಕಳು ವೇಶ್ಯೆಯರಾಗುತ್ತಾರೆ ಎಂದು ಪಾಕಿಸ್ತಾನಿ ಯೂಟ್ಯೂಬರ್ Hasan Iqbal Chishti ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನಿ ಯೂಟ್ಯೂಬರ್ (Pakistani Youtuber) ಹಸನ್ ಇಕ್ಬಾಲ್ ಚಿಶ್ತಿ ಎಂಬಾತ ತನ್ನ ನೂತನ ಹಾಡೊಂದರಲ್ಲಿ ಇಂತಹ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹೆಣ್ಣು ಮಕ್ಕಳ ಶಿಕ್ಷಣವನ್ನು ಖಂಡಿಸುವ ಸಾಹಿತ್ಯ ಬರೆದು ಹಾಡು ತಯಾರಿಸಿದ್ದಾನೆ.

ಯೂಟ್ಯೂಬ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

‘ಅಪ್ನಿ ಧಿ ಸ್ಕೂಲ್ಲೋ ಹತಾ ಲೇ ಓಥಿ ಡ್ಯಾನ್ಸ್ ಕರಡಿ ಪಾಯಿ ಏ.. ಎನ್ನುವ ಶೀರ್ಷಿಕೆಯ ಈ ಹಾಡನ್ನು ಈ ವರ್ಷದ ಜೂನ್‌ನಲ್ಲಿ ಬಿಡುಗಡೆ ಮಾಡಿರುವ ಈತ ವಿಡಿಯೋದಲ್ಲಿ ಜನರು ತಮ್ಮ ಹೆಣ್ಣುಮಕ್ಕಳನ್ನು ಶಾಲೆಯಿಂದ ತೆಗೆದುಹಾಕುವಂತೆ ಕರೆ ನೀಡಿರುವ ಈತ ಹೆಣ್ಣು ಮಕ್ಕಳ ಶಿಕ್ಷಣವನ್ನು ಇಸ್ಲಾಂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾನೆ.

ಅಲ್ಲದೆ ಜನರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಯಿಂದ ತೆಗೆದುಹಾಕಲು ಮತ್ತು ಮನೆಗಳಲ್ಲಿ ಇರಿಸಿಕೊಳ್ಳಲು ಸಲಹೆ ನೀಡಿದ್ದಾನೆ. ನೀವು ಗೌರವವನ್ನು ಕಳೆದುಕೊಳ್ಳಲು ಬಯಸಿದರೆ ಅಥವಾ ಅವಳನ್ನು ವೇಶ್ಯೆಯನ್ನಾಗಿ ಮಾಡಲು ಬಯಸಿದರೆ ಅವಳನ್ನು ಶಾಲೆಗೆ ಕಳುಹಿಸಿ ಎಂದು ಹಾಡಿದ್ದಾನೆ. ಶಾಲೆಗೆ ಹೋಗುವ ಹೆಣ್ಣುಮಕ್ಕಳು ತಮ್ಮ ಪವಿತ್ರತೆ ಮತ್ತು ಗೌರವವನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳುವ ಸಾಹಿತ್ಯವೂ ಇದೆ.

ಈಗಾಗಲೇ ಆಫ್ಘಾನಿಸ್ತಾನದಲ್ಲಿ ಅಲ್ಲಿನ ತಾಲಿಬಾನ್ ಸರ್ಕಾರ ಮಹಿಳಾ ಶಿಕ್ಷಣವನ್ನು ವಿರೋಧಿಸಿದ್ದು ಮಾತ್ರವಲ್ಲದೇ ನಿರ್ಬಂಧ ಕೂಡ ಹೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!