ಜೋ ಬೈಡನ್  
ವಿದೇಶ

'ಯುವ ಧ್ವನಿ'ಗಳಿಗೆ ಅವಕಾಶ ನೀಡುವ ಸಮಯವಿದು, ದೇಶ ಒಗ್ಗೂಡಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಜೋ ಬೈಡನ್

ಈ ವರ್ಷಾಂತ್ಯಕ್ಕೆ ನಡೆಯಲಿರುವ ಅಧ್ಯಕ್ಷ ಚುನಾವಣೆಯಿಂದ ಜೋ ಬೈಡನ್ ಹಿಂದೆ ಸರಿದಿರುವುದರಿಂದ ಉಪಾಧ್ಯಕ್ಷೆ 59 ವರ್ಷದ ಕಮಲಾ ಹ್ಯಾರಿಸ್ ಅವರು ಹೊಸ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಯಾಗಲಿದ್ದಾರೆ.

ವಾಷಿಂಗ್ಟನ್: ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದ್ದು ನಾನು ಈ ಬಾರಿ 2024 ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ. ನಿನ್ನೆ ಅವರು ಓವಲ್ ಆಫೀಸ್ ಮಾಡಿದ ಐತಿಹಾಸಿಕ ಭಾಷಣದಲ್ಲಿ ಪಕ್ಷದಲ್ಲಿ ಕಿರಿಯರು ಧ್ವನಿಯೆತ್ತುವ ಸಮಯ ಇದಾಗಿದ್ದು ಯುವಕರಿಗೆ ಅವಕಾಶ ಮಾಡಿಕೊಡುವುದು ತಮ್ಮ ಉದ್ದೇಶವಾಗಿದೆ ಎಂದಿದ್ದಾರೆ.

ನಾನು ಈ ಹುದ್ದೆ ಮತ್ತು ಕಛೇರಿಯನ್ನು ಗೌರವಿಸುತ್ತೇನೆ. ಆದರೆ ಅದಕ್ಕಿಂತಲೂ ಹೆಚ್ಚು ನನ್ನ ದೇಶವನ್ನು ಹೆಚ್ಚು ಪ್ರೀತಿಸುತ್ತೇನೆ ಎಂದು 81 ವರ್ಷ ವಯಸ್ಸಿನ ಜೋ ಬೈಡನ್ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಪ್ರೈಮ್-ಟೈಮ್ ಭಾಷಣದಲ್ಲಿ ಇಂದು ದೇಶ ಪ್ರಜಾಪ್ರಭುತ್ವವನ್ನು ಸ್ವೀಕರಿಸಲು ದ್ವೇಷ ಭಾವನೆಯನ್ನು ದೂರ ಮಾಡಬೇಕೆಂದು ಒತ್ತಾಯಿಸಿದರು.

ಇಂದು ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಯು ಅಪಾಯದಲ್ಲಿದೆ, ಅದನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ಹೊಸ ಪೀಳಿಗೆಗೆ ಗೌರವಾನ್ವಿತ ಹುದ್ದೆಯ ಜ್ಯೋತಿಯನ್ನು ರವಾನಿಸುವುದು ಮುಂದಿನ ಉತ್ತಮ ಮಾರ್ಗವಾಗಿದೆ ಎಂದು ನಾನು ನಿರ್ಧರಿಸಿದ್ದೇನೆ. ಅದು ನಮ್ಮ ರಾಷ್ಟ್ರವನ್ನು ಒಂದುಗೂಡಿಸಲು ಉತ್ತಮ ಮಾರ್ಗವಾಗಿದೆ ಎಂದರು.

ಈ ವರ್ಷಾಂತ್ಯಕ್ಕೆ ನಡೆಯಲಿರುವ ಅಧ್ಯಕ್ಷ ಚುನಾವಣೆಯಿಂದ ಜೋ ಬೈಡನ್ ಹಿಂದೆ ಸರಿದಿರುವುದರಿಂದ ಉಪಾಧ್ಯಕ್ಷೆ 59 ವರ್ಷದ ಕಮಲಾ ಹ್ಯಾರಿಸ್ ಅವರು ಹೊಸ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಯಾಗಲಿದ್ದಾರೆ.

ಕಮಲಾ ಹ್ಯಾರಿಸ್ ಅವರಿಗೆ ಅನುಭವವಿದೆ, ಅವರು ಕಠಿಣವಾಗಿದ್ದು ದೃಢ ನಿರ್ಧಾರ ಕೈಗೊಳ್ಳಲು ಸಮರ್ಥರಾಗಿದ್ದಾರೆ ಎಂದು ನಾಲ್ಕನೇ ಬಾರಿ ದೇಶವನ್ನುದ್ದೇಶಿಸಿ ಮಾಡಿದ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿ ಸುಮಾರು ಒಂದು ವಾರ ಕಾಲ ಡೆಲಾವೆರ್ ನ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ನಲ್ಲಿದ್ದ ಜೋ ಬೈಡನ್ ಮಂಗಳವಾರವಷ್ಟೇ ಶ್ವೇತಭವನ ಕಚೇರಿಗೆ ಆಗಮಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT