ಜೈಶಂಕರ್, ಬ್ಲಿಂಕನ್  
ವಿದೇಶ

ಟೋಕಿಯೊ: ಪ್ರಾದೇಶಿಕ, ಜಾಗತಿಕ ಸಮಸ್ಯೆಗಳ ಕುರಿತು ಜೈಶಂಕರ್, ಬ್ಲಿಂಕನ್ ಚರ್ಚೆ

'ಇಂದು ಟೋಕಿಯೊದಲ್ಲಿ ಬ್ಲಿಂಕೆನ್ ಜೊತೆಗಿನ ಭೇಟಿ ಉತ್ತಮವಾಗಿತ್ತು. ನಮ್ಮ ದ್ವಿಪಕ್ಷೀಯ ಕಾರ್ಯಸೂಚಿಯು ಸ್ಥಿರವಾಗಿ ಮುಂದುವರಿಯುತ್ತದೆ. ಅಲ್ಲದೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದರು'

ಟೋಕಿಯೊ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಭಾನುವಾರ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರನ್ನು ಭೇಟಿ ಮಾಡಿದ್ದು, ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾದೇಶಿಕ, ಜಾಗತಿಕ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದ್ದಾರೆ. ಟೋಕಿಯೊದಲ್ಲಿ ಕ್ವಾಡ್ ವಿದೇಶಾಂಗ ಸಚಿವರ ಸಭೆಯ ಭಾಗವಾಗಿ ಉಭಯ ನಾಯಕರು ಭೇಟಿಯಾದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೈಶಂಕರ್, 'ಇಂದು ಟೋಕಿಯೊದಲ್ಲಿ ಬ್ಲಿಂಕೆನ್ ಜೊತೆಗಿನ ಭೇಟಿ ಉತ್ತಮವಾಗಿತ್ತು. ನಮ್ಮ ದ್ವಿಪಕ್ಷೀಯ ಕಾರ್ಯಸೂಚಿಯು ಸ್ಥಿರವಾಗಿ ಮುಂದುವರಿಯುತ್ತದೆ. ಅಲ್ಲದೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದರು. ನಾಳೆ ಕ್ವಾಡ್ ವಿದೇಶಾಂಗ ಸಚಿವರ ಸಭೆಗೆ ಹಾಜರಾಗಲು ಎದುರು ನೋಡಬಹುದು' ಎಂದು ಬರೆದುಕೊಂಡಿದ್ದಾರೆ.

ಇಂಡೋ-ಪೆಸಿಫಿಕ್‌ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಯಾವುದೇ ಪ್ರಭಾವದಿಂದ ಮುಕ್ತವಾಗಿಡಲು ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ನವೆಂಬರ್ 2017 ರಲ್ಲಿ ಭಾರತ, ಜಪಾನ್, ಯುಎಸ್ ಮತ್ತು ಆಸ್ಟ್ರೇಲಿಯಾಗಳು ಕ್ವಾಡ್ ಸ್ಥಾಪಿಸುವ ದೀರ್ಘಾವಧಿಯ ಪ್ರಸ್ತಾಪಕ್ಕೆ ರೂಪು ನೀಡಿದ್ದವು.

ದಕ್ಷಿಣ ಚೀನಾ ಸಮುದ್ರವು ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರಗಳ ನಡುವಿನ ಜಂಕ್ಷನ್‌ನಲ್ಲಿದೆ. ದಕ್ಷಿಣ ಚೀನಾ ಸಮುದ್ರದ ಬಹುಭಾಗವನ್ನು ಚೀನಾ ತನ್ನದೆಂದು ಹೇಳಿಕೊಂಡರೆ, ಫಿಲಿಪೈನ್ಸ್, ವಿಯೆಟ್ನಾಂ, ಮಲೇಷ್ಯಾ, ಬ್ರೂನಿ ಮತ್ತು ತೈವಾನ್ ಕಡಲ ಪ್ರದೇಶ ತಮ್ಮದು ಎಂದು ಹೇಳುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT