ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ 
ವಿದೇಶ

Kuwait Fire: ಮಂಗಾಫ್ ನಗರದ ಕಟ್ಟಡದಲ್ಲಿ ಅಗ್ನಿ ಅವಘಡ; 40 ಮಂದಿ ಸಜೀವ ದಹನ, 30 ಜನರಿಗೆ ಗಾಯ; ಬಹುತೇಕ ಭಾರತೀಯರು!

ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 40 ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ.

ಮಂಗಾಫ್‌(ಕುವೈತ್‌): ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 40 ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ.

ವರದಿಗಳ ಪ್ರಕಾರ, ಈ ದುರಂತ ಘಟನೆಯಲ್ಲಿ ಕನಿಷ್ಠ ನಾಲ್ವರು ಭಾರತೀಯರು ಸಹ ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿ ಮಲಯಾಳಂ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಹೆಚ್ಚಿನವರು ತಮಿಳುನಾಡು ಮತ್ತು ಕೇರಳದವರು ಎಂದು ತಿಳಿದುಬಂದಿದೆ.

ಕುವೈತ್ ಆರೋಗ್ಯ ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ಸೇವೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಸಚಿವಾಲಯ ಹೇಳಿದೆ.

ವರದಿಗಳ ಪ್ರಕಾರ, ಬುಧವಾರ ಮುಂಜಾನೆ 4:30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವರು ಬೆಂಕಿಯನ್ನು ನೋಡಿ ಅಪಾರ್ಟ್‌ಮೆಂಟ್‌ಗಳಿಂದ ಹಾರಿ ಸಾವನ್ನಪ್ಪಿದರೆ, ಇನ್ನು ಕೆಲವರು ಸುಟ್ಟಗಾಯ ಮತ್ತು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್‌; ನ್ಯೂಯಾರ್ಕ್ ಟೈಮ್ಸ್ ವರದಿ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ರಾಜ್ಯದ ಜನತೆಗ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿ

SCROLL FOR NEXT