ಯುಕೆ, ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ 
ವಿದೇಶ

ಜಿ7 ಶೃಂಗಸಭೆ: ಝೆಲೆನ್ಸ್ಕಿ, ಮ್ಯಾಕ್ರನ್, ರಿಷಿ ಸುನಕ್ ಭೇಟಿಯಾದ ಪ್ರಧಾನಿ ಮೋದಿ

ಇಟಲಿಯ ಅಪುಲಿಯಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು.

ಬರಿ: ಇಟಲಿಯ ಅಪುಲಿಯಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು.

ರಷ್ಯಾ-ಉಕ್ರೇನ್ ಸಂಘರ್ಷದ ವಿವಿಧ ಅಂಶಗಳನ್ನು ಝೆಲೆನ್ಸ್ಕಿ, ಮೋದಿಯವರಿಗೆ ವಿವರಿಸಿದರು ಎಂದು ತಿಳಿದುಬಂದಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಹಿರೋಷಿಮಾದಲ್ಲಿ ನಡೆದ ಹಿಂದಿನ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿದ್ದರು. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂದು ಭಾರತ ಪ್ರತಿಪಾದಿಸುತ್ತಿದೆ.

ಬಳಿಕ ಪ್ರಧಾನಿ ಮೋದಿ ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನುಭೇಟಿಯಾದರು.ಈ ವೇಳೆ ಉಭಯ ರಾಷ್ಟ್ರಗಳ ನಾಯಕರು ಭಾರತ ಮತ್ತು ಯುಕೆ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಶೇಷವಾಗಿ ಎನ್‌ಡಿಎ ಸರ್ಕಾರದ ಮೂರನೇ ಅವಧಿಯಲ್ಲಿ ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಸೆಮಿಕಂಡಕ್ಟರ್‌, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲಾಯಿತು. ಪರಸ್ಪರ ಕಾರ್ಯತಂತ್ರದ ಹಿತಾಸಕ್ತಿಗಳನ್ನು ಒತ್ತಿಹೇಳುವ ಮೂಲಕ ರಕ್ಷಣಾ ವಲಯದಲ್ಲಿ ಸಹಯೋಗವನ್ನು ಮತ್ತಷ್ಟು ಗಟ್ಟಿಗೊಳಿಸುವ ಅವಕಾಶಗಳ ಕುರಿತು ಮಾತುಕತೆ ನಡೆಸಿದರು. ಕಳೆದ ಸೆಪ್ಟೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಸುನಕ್ ಮತ್ತು ಮೋದಿ ಕೊನೆಯದಾಗಿ ಭೇಟಿಯಾಗಿದ್ದರು.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದ ಮೋದಿ, ರಕ್ಷಣೆ, ಪರಮಾಣು ಮತ್ತು ಬಾಹ್ಯಾಕಾಶ ಕ್ಷೇತ್ರಗಳು ಸೇರಿದಂತೆ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಅಲ್ಲದೇ, ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ. ಜನವರಿಯಲ್ಲಿ ಭಾರತದ 75 ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದಾಗ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT