ಜಿ-7 ಶೃಂಗಸಭೆಯಲ್ಲಿ ಇಟಾಲಿ ಪ್ರಧಾನಿ ಜಾರ್ಜಿಯಾ ಮೆಲೋನಿ-ಮೋದಿ  online desk
ವಿದೇಶ

"ಮೆಲೋಡಿ ತಂಡದಿಂದ ಹಲೋ": ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ ಮೋದಿ- ಜಾರ್ಜಿಯಾ ಮೆಲೋನಿ ಸೆಲ್ಫಿ ವಿಡಿಯೋ!

ಜಿ-7 ಶೃಂಗಸಭೆಯಲ್ಲಿ ಭಾಗಿಯಾಗಲು ಇಟಾಲಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್, ಬ್ರಿಟನ್ ಸೇರಿದಂತೆ ಮಿತ್ರ ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡಿದ್ದಾರೆ.

ಇಟಾಲಿ: ಜಿ-7 ಶೃಂಗಸಭೆಯಲ್ಲಿ ಭಾಗಿಯಾಗಲು ಇಟಾಲಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್, ಬ್ರಿಟನ್ ಸೇರಿದಂತೆ ಮಿತ್ರ ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡಿದ್ದಾರೆ.

ಈ ನಡುವೆ ಇಟಾಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಶೃಂಗಸಭೆಯ ವೇಳೆ ಕ್ಲಿಕ್ಕಿಸಿದ ಸೆಲ್ಫಿ ವಿಡೀಯೋ ಎಲ್ಲೆಡೆ ವೈರಲ್ ಆಗತೊಡಗಿದೆ.

ಸೆಲ್ಫಿ ವಿಡಿಯೋ ಕ್ಲಿಕ್ಕಿಸಿರುವ ಮೆಲೋನಿ, ಮೆಲೋಡಿ (ಮೆಲೋನಿ-ಮೋದಿ) ತಂಡದಿಂದ ನಮಸ್ಕಾರ ("Hello from the Melodi team) ಎಂದು ಹೇಳಿ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಪ್ರಧಾನಿ ಮೋದಿ-ಜಾರ್ಜಿಯಾ ಮೆಲೋನಿ ನಡುವೆ ದ್ವಿಪಕ್ಷೀಯ ಸಭೆ ನಡೆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮೆಲೋಡಿ (ಮೆಲೋನಿ-ಮೋದಿ) ಎಂಬ ಶಬ್ದ ಟ್ರೆಂಡ್ ಆಗಿತ್ತು.

ಮೆಲೋನಿ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ-ಇಟಲಿ ಸ್ನೇಹ ಚಿರಾಯುವಾಗಲಿ ಎಂದು ಹೇಳಿದ್ದಾರೆ.

ಕಳೆದ ವರ್ಷ ಕೂಡ ದುಬೈನಲ್ಲಿ ನಡೆದ COP28 ಹವಾಮಾನ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರು ನಾಯಕರ ಸೆಲ್ಫಿಯನ್ನು ಅಂತರ್ಜಾಲದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. "COP28 ನಲ್ಲಿ ಉತ್ತಮ ಸ್ನೇಹಿತರು. #ಮೆಲೋಡಿ ಎಂದು ಮೆಲೋನಿ ಛಾಯಾಚಿತ್ರಕ್ಕೆ ಶೀರ್ಷಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT