ಸಿಖ್‌ ಪ್ರತ್ಯೇಕತಾವಾದಿ ಗುರುಪತ್‌ವಂತ್‌ ಸಿಂಗ್‌ ಪನ್ನುನ್ 
ವಿದೇಶ

ಸಿಖ್​ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು: ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ವಾಷಿಂಗ್ಟನ್: ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ಪನ್ನುನ್ ಹತ್ಯೆ ಸಂಚಿನಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ನಿಖಿಲ್ ಅವರನ್ನು ಬಂಧಿಸುವಂತೆ ಅಮೆರಿಕಾ ಮಾಡಿದ್ದ ಮನವಿ ಮಾಡಿತ್ತು. ಇದರಂತೆ ಕಳೆದ ವರ್ಷ ಅವರನ್ನು ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಇಂದು ಅವರನ್ನು ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಗುಪ್ತಾ ಅವರನ್ನು ಸದ್ಯ ಬ್ರೂಕ್ಲಿನ್‌ನ ಫೆಡರಲ್ ಮೆಟ್ರೋಪಾಲಿಟನ್ ವಿಚಾರಣಾ ಕೇಂದ್ರದಲ್ಲಿ ಇರಿಸಲಾಗಿದೆ. ಜೆಕ್ ಗಣರಾಜ್ಯದಲ್ಲಿ ಬಂಧನಕ್ಕೀಡಾಗಿದ್ದ ಗುಪ್ತಾ ಅವರನ್ನು ವಾರಾಂತ್ಯವೇ ಅಮೆರಿಕಕ್ಕೆ ಕರೆತರಲಾಗಿದೆ. ಸಾಮಾನ್ಯವಾಗಿ ಹಸ್ತಾಂತರಗೊಂಡವರನ್ನು ಒಂದು ದಿನದೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಹಾಗೇ ಆಗಿಲ್ಲ. ಕೆಲವು ಸೂಕ್ಷ್ಮ ತನಿಖೆ ನಡೆಯುತ್ತಿರಬಹುದು ಎಂದು ಮೂಲಗಳು ತಿಳಿಸಿವೆ.

ಪನ್ನುನ್ ಅವರನ್ನು ಕೊಲ್ಲಲು ವ್ಯಕ್ತಿಯೊಬ್ಬರಿಗೆ ಸುಪಾರಿ ನೀಡಿದ್ದ ಗುಪ್ತಾ, ಮುಂಗಡವಾಗಿ 15,000 ಡಾಲರ್ ನೀಡಿದ್ದ ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾರೆ. ಹೆಸರು ಬಹಿರಂಗಪಡಿಸದ ಭಾರತೀಯ ಅಧಿಕಾರಿಯೊಬ್ಬರು ಸಹ ಇದರಲ್ಲಿ ಭಾಗಿಯಾಗಿದ್ದಾರೆ ಎಂದೂ ಆರೋಪಿಸಲಾಗಿದೆ.

ವಾರ್ಷಿಕ ಐಸಿಎಟಿ ಮಾತುಕತೆಗಾಗಿ ಅಮೆರಿಕ ಭದ್ರತಾ ಸಲಹೆಗಾರ ಜೆಕ್ ಸುಲ್ಲಿವನ್ ಭಾರತಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಈ ಹಸ್ತಾಂತರ ಪ್ರಕ್ರಿಯೆ ನಡೆದಿದೆ. ಭಾರತದ ಎನ್‌ಎಸ್‌ಎ ಅಜಿತ್ ಢೋಬಾಲ್ ಜೊತೆ ಅವರು ಈ ವಿಷಯ ಪ್ರಸ್ತಾಪಿಸುವ ನಿರೀಕ್ಷೆ ಇದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ