ಎಸ್ ಜೈಶಂಕರ್-ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ TNIE
ವಿದೇಶ

ಕತಾರ್ ಪ್ರಧಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಬಗ್ಗೆ ಚರ್ಚೆ

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ದೋಹಾ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ದೋಹಾದಲ್ಲಿ ಭೇಟಿ ಮಾಡಿದರು. ಭೇಟಿ ವೇಳೆ ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜೈಶಂಕರ್ ಅವರು 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದು ಕತಾರ್‌ನ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಥಾನಿ ಅವರನ್ನು ಇಂದು ಮಧ್ಯಾಹ್ನ ದೋಹಾದಲ್ಲಿ ಭೇಟಿಯಾಗಲು ಸಂತೋಷವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಕೆಗಳನ್ನು ಅಮೀರ್ ಅವರಿಗೆ ತಿಳಿಸಿದರು.

"ನಾವು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳ ಮೇಲೆ ಕೇಂದ್ರೀಕರಿಸುವ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದ್ದೇವೆ" ಎಂದು ಅವರು ಹೇಳಿದರು. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಗಾಜಾ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದರು.

ವಿದೇಶಾಂಗ ಸಚಿವರು, "ಭಾರತ-ಕತಾರ್ ಸಂಬಂಧಗಳನ್ನು ಮತ್ತಷ್ಟು ಸುಧಾರಿಸಲು ನಾವು ಎದುರು ನೋಡುತ್ತಿದ್ದೇವೆ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಮಾತುಕತೆಯನ್ನು ಮುಂದುವರಿಸುತ್ತೇವೆ" ಎಂದು ಹೇಳಿದರು.

ಆಗಸ್ಟ್ 2022ರಲ್ಲಿ ಬಂಧನದ ನಂತರ ಮರಣದಂಡನೆಗೆ ಗುರಿಯಾದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್ ಬಿಡುಗಡೆ ಮಾಡಿದ ನಾಲ್ಕೂವರೆ ತಿಂಗಳ ನಂತರ ಜೈಶಂಕರ್ ಅವರು ಕತಾರ್ ಗೆ ಭೇಟಿ ನೀಡಿದರು.

ಶಿಷ್ಟಾಚಾರದ ಮುಖ್ಯಸ್ಥ ಇಬ್ರಾಹಿಂ ಫಕ್ರು ಅವರು ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇದಕ್ಕೂ ಮುನ್ನ ಫೆಬ್ರವರಿ 14 ರಿಂದ 15 ರವರೆಗೆ ಕತಾರ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಚರ್ಚಿಸಿದ್ದರು.

"ಭಾರತ ಮತ್ತು ಕತಾರ್ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧವನ್ನು ಹೊಂದಿವೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!